ಗುರುವಾರ , ಆಗಸ್ಟ್ 11, 2022
21 °C

‘ತಾಂಡಾ ರೋಜಗಾರ್‌ ಮಿತ್ರ’ ಜಾರಿಗೆ: ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಜೀವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ತಾಂಡಾಗಳಲ್ಲಿ ಉದ್ಯೋಗ ಸೃಷ್ಟಿಗೆ ‘ರೋಜಗಾರ್‌ ಮಿತ್ರ’ ಯೋಜನೆ ಜಾರಿಗೆ ತರಲಾಗಿದೆ’ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ತಿಳಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾಂಡಾಗಳಿಂದ ಜನ ವಲಸೆ ಹೋಗದಂತೆ ತಡೆಯುವುದು ನಮ್ಮ ಮುಖ್ಯ ಉದ್ದೇಶ. ಗ್ರಾಮೀಣ ಅಭಿವೃದ್ಧಿ ಇಲಾಖೆ ಹಾಗೂ ತಾಂಡಾ ನಿಗಮದ ಸಹಭಾಗಿತ್ವದಲ್ಲಿ ತಾಂಡಾ ‘ರೋಜಗಾರ್‌ ಮಿತ್ರ’ ಜಾರಿಗೆ ತರಲಾಗಿದೆ. ನಿಗಮದಿಂದ 300 ಯುವಕರನ್ನು ‘ರೋಜಗಾರ್ ಮಿತ್ರ’ ಎಂದು ನೇಮಕ ಮಾಡಿಕೊಳ್ಳಲಾಗುವುದು’ ಎಂದರು.

‘ತಾಂಡಾದಿಂದ ಬೇರೆಡೆ ವಲಸೆ ಹೋದವರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗುವುದು. ಇತ್ತೀಚೆಗೆ ಮಂಡ್ಯದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ತಾಲ್ಲೂಕಿನ ತಾಳೆಬಸಾಪುರ ಗ್ರಾಮದ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ₹8.50 ಲಕ್ಷ ಪರಿಹಾರ ನೀಡಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಕಾನೂನು ಪ್ರಕಾರ ಶಿಕ್ಷೆ ನೀಡಲಾಗುತ್ತದೆ. ಆದರೆ, ಕೃತ್ಯ ಎಸಗಿದವರನ್ನು ಶೂಟೌಟ್ ಮಾಡಿ ಕೊಚ್ಚಿ ಪೀಸ್ ಪೀಸ್ ಮಾಡಿದರೇ ಇನ್ನೊಂದು ಘಟನೆ ನಡೆಯಲ್ಲ ಅಂತ ಹೇಳುವುದಕ್ಕೆ ಬರುವುದಿಲ್ಲ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು