ಸೋಮವಾರ, ಸೆಪ್ಟೆಂಬರ್ 27, 2021
21 °C
ವಾರಾಂತ್ಯಕ್ಕೆ ಸ್ಮಾರಕ ಪ್ರವೇಶ ನಿರ್ಬಂಧ

ಪ್ರಮುಖ ದೇವಸ್ಥಾನಗಳಿಗೂ ಜನ ಹೋಗುವಂತಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಕೊರೊನಾ ಹರಡದಂತೆ ತಡೆಯಲು ಜಿಲ್ಲಾಡಳಿತವು ಶನಿವಾರ ಇನ್ನಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. 

ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲ ಸ್ಮಾರಕಗಳಿಗೆ ವಾರಾಂತ್ಯದಲ್ಲಿ ಪ್ರವಾಸಿಗರ ಭೇಟಿ ನಿರ್ಬಂಧಿಸಿದರೆ, ಆಯಾ ದೇವಸ್ಥಾನಗಳಲ್ಲಿ ಹೆಚ್ಚಿನ ಭಕ್ತರು ಸೇರುವ ದಿನಗಳಂದು ಪ್ರವೇಶ ನಿಷೇಧಿಸಿದೆ.

ಈ ಕುರಿತು ಶನಿವಾರ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಈ ಆದೇಶವು ಸೆ. 9ರ ವರೆಗೆ ಜಾರಿಯಲ್ಲಿರುತ್ತದೆ. 

ಹೊಸಪೇಟೆಯ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನ, ಜಂಬುನಾಥಸ್ವಾಮಿ ದೇವಸ್ಥಾನಗಳು ಪ್ರತಿ ಸೋಮವಾರ ಮತ್ತು ಅಮವಾಸ್ಯೆ, ವಡಕರಾಯ ರಂಗನಾಥ ಸ್ವಾಮಿ ದೇಗುಲಕ್ಕೆ ಶನಿವಾರ ಜನರ ಪ್ರವೇಶ ನಿರ್ಬಂಧಿಸಲಾಗಿದೆ. 

ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಶನಿವಾರದಿಂದ ಸೋಮವಾರದ ವರೆಗೆ ಮತ್ತು ಅಮವಾಸ್ಯೆಯಂದು ಪ್ರವೇಶ ಇರುವುದಿಲ್ಲ. ಹೂವಿನಹಡಗಲಿ ತಾಲ್ಲೂಕಿನ ಮೈಲಾರದ ಮೈಲಾರಲಿಂಗ ಸ್ವಾಮಿ ದೇವಸ್ಥಾನಕ್ಕೆ ಶನಿವಾರ, ಭಾನುವಾರ ಹಾಗೂ ಹುಣ್ಣಿಮೆಯ ದಿನ ಯಾರೂ ಹೋಗುವಂತಿಲ್ಲ.

ಹಡಗಲಿ ತಾಲ್ಲೂಕಿನ ಕುರುವತ್ತಿ ಮಲ್ಲಿಕಾರ್ಜುನ ಮತ್ತು ಬಸವೇಶ್ವರ ಸ್ವಾಮಿ ದೇವಸ್ಥಾನ, ಕೊಟ್ಟೂರಿನ ಗುರು ಬಸವೇಶ್ವರ ದೇವಸ್ಥಾನಗಳಿಗೆ ಭಾನುವಾರ, ಸೋಮವಾರ ಮತ್ತು ಅಮವಾಸ್ಯೆಗೆ ಭೇಟಿ ಕೊಡುವಂತಿಲ್ಲ. ಹಡಗಲಿ ತಾಲ್ಲೂಕಿನ ಮದಲಗಟ್ಟಿಯ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶನಿವಾರ, ಭಾನುವಾರ ಹಾಗೂ ಪ್ರತಿ ಅಮವಾಸ್ಯೆ ಜನರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು