ಶುಕ್ರವಾರ, ಜುಲೈ 1, 2022
26 °C

‘ಉಚಿತವಾಗಿ ಆರೋಗ್ಯ ಕಾರ್ಡ್‌ ವಿತರಣೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ಆಯುಷ್ಮಾನ್‌ ಭಾರತ–ಆರೋಗ್ಯ ಕರ್ನಾಟಕ’ ಯೋಜನೆಯಡಿ ಬಿ.ಪಿ.ಎಲ್‌. ಪಡಿತರದಾರರಿಗೆ ಉಚಿತವಾಗಿ ಕಾರ್ಡುಗಳನ್ನು ವಿತರಿಸಲಾಗುತ್ತಿದ್ದು, ಯಾರೊಬ್ಬರೂ ಹಣ ಪಾವತಿಸಬೇಕಿಲ್ಲ’ ಎಂದು ಇಲ್ಲಿನ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಸಲೀಂ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ‘ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಒನ್‌, ಸೇವಾ ಸಿಂಧು ಕೇಂದ್ರಗಳಲ್ಲಿ ಬಿಪಿಎಲ್‌ ಕಾರ್ಡುದಾರರು ₹10, ಎಪಿಎಲ್‌ ಕಾರ್ಡುದಾರರು 35 ಶುಲ್ಕ ಪಾವತಿಸಿ ಆರೋಗ್ಯ ಕಾರ್ಡು ಪಡೆಯಬಹುದು. ಯಾವುದೇ ಕಾರಣಕ್ಕೂ ಅದಕ್ಕಿಂತ ಹೆಚ್ಚಿನ ಶುಲ್ಕ ನೀಡಬಾರದು. ಯಾರು ಕೂಡ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿಗೆ ಪಡೆಯಬಾರದು. ಅದು ಕಾನೂನುಬಾಹಿರ’ ಎಂದು ಹೇಳಿದ್ದಾರೆ.

‘ನೋಂದಾಯಿತ ಆಸ್ಪತ್ರೆಗಳಲ್ಲಿ ಬಿಪಿಎಲ್‌ ಕಾರ್ಡುದಾರರಿಗೆ ಸಂಪೂರ್ಣ ಉಚಿತ, ಎ.ಪಿ.ಎಲ್‌. ಕಾರ್ಡು ಹೊಂದಿದವರಿಂದ ಶೇ 30ರಷ್ಟು ಚಿಕಿತ್ಸಾ ವೆಚ್ಚವನ್ನು ಭರಿಸಿಕೊಂಡು, ಚಿಕಿತ್ಸೆ ನೀಡಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು