ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಕಟೀಲ್‌, ಶ್ರುತಿ ಪ್ರಚಾರ

Last Updated 27 ನವೆಂಬರ್ 2019, 15:33 IST
ಅಕ್ಷರ ಗಾತ್ರ

ಹೊಸಪೇಟೆ: ‘ವಿಜಯನಗರ ಕ್ಷೇತ್ರದ ಉಪಚುನಾವಣೆ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಆನಂದ್‌ ಸಿಂಗ್‌ ಪರ ಗುರುವಾರ (ನ.28) ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ನಾಯಕಿ ಶ್ರುತಿ ಪ್ರಚಾರ ಕೈಗೊಳ್ಳುವರು’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಿಗ್ಗೆ ಹತ್ತು ಗಂಟೆಗೆ ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಕಟೀಲ್‌ ಅವರ ರೋಡ್‌ ಶೋ ಆರಂಭವಾಗಲಿದೆ. ಬಳಿಕ ಅದು ಚಿತ್ತವಾಡ್ಗಿಯ 12ನೇ ವಾರ್ಡ್‌, ಒಂದನೇ ವಾರ್ಡ್‌, 11ನೇ ವಾರ್ಡ್‌, ಎರಡನೇ ವಾರ್ಡ್‌ ಮೂಲಕ ಹಾದು ಪಟೇಲ್‌ ನಗರದಲ್ಲಿ ಕೊನೆಗೊಳ್ಳಲಿದೆ’ ಎಂದು ಮಾಹಿತಿ ನೀಡಿದರು.

‘ಬಳಿಕ ನಡೆಯಲಿರುವ ಮಹಿಳಾ ಸಮಾವೇಶದಲ್ಲಿ ಶ್ರುತಿ ಭಾಗವಹಿಸುವರು. ವಿವಿಧ ಭಾಗಗಳಿಂದ ನೂರಾರು ಮಹಿಳೆಯರು ಪಾಲ್ಗೊಳ್ಳುವರು’ ಎಂದು ತಿಳಿಸಿದರು.

ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್‌. ಹನುಮಂತಪ್ಪ ಮಾತನಾಡಿ, ‘ನ. 30ರಂದು ಪಟೇಲ್‌ ನಗರದಲ್ಲಿ ಪಕ್ಷದ ಪರಿಶಿಷ್ಟ ಜಾತಿ ಮೋರ್ಚಾದ ಸಮಾವೇಶ ನಡೆಯಲಿದ್ದು, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಉದ್ಘಾಟಿಸುವರು’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT