"ಸ್ವಾತಂತ್ರ್ಯ ದಿನವಲ್ಲ ಕರಾಳ ದಿನ'

7
ದಲಿತ ದೌರ್ಜ್ಯನ್ಯ ಕಾಯ್ದೆ ಬಲಪಡಿಸಲು ಆಗ್ರಹ

"ಸ್ವಾತಂತ್ರ್ಯ ದಿನವಲ್ಲ ಕರಾಳ ದಿನ'

Published:
Updated:
Deccan Herald

ಬಳ್ಳಾರಿ: ‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಮಾದಿಗ ಸಮುದಾಯಕ್ಕೆ ಮಂತ್ರಿಮಂಡಲದಲ್ಲಿ ಸ್ಥಾನ ಕಲ್ಪಿಸಬೇಕು’ ಎಂದು ಆಗ್ರಹಿಸಿ ಬಾಬು ಜಗಜೀವನರಾಂ ಜನಜಾಗೃತಿ ವೇದಿಕೆ ಕಾರ್ಯಕರ್ತರು  ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಸ್ವಾತಂತ್ರ್ಯ ದಿನವನ್ನು ಕರಾಳ ದಿನವನ್ನಾಗಿ ಆಚರಿಸಿದರು.

‘ದಲಿತರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರದೆ ಯಥಾವತ್ತಾಗಿ ಮುಂದುವರಿಸಬೇಕು ಬಹುಸಂಖ್ಯಾತ ಮಾದಿಗ ಸಮುದಾಯದವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ರಾಜ್ಯ ಘಟಕ ಅಧ್ಯಕ್ಷ ಟಿ.ಪಂಪಾಪತಿ ಆಗ್ರಹಿಸಿದರು.

‘ಸ್ವಾತಂತ್ರ್ಯ ಲಭಿಸಿ 7 ದಶಕಗಳು ಗತಿಸಿದರೂ ದಲಿತರ ಮೇಲಿನ ದೌರ್ಜನ್ಯಗಳು ನಿಂತಿಲ್ಲ. ಅಸ್ಪೃಶ್ಯತೆ ಆಚರಣೆಯನ್ನು ನಿವಾರಿಸಿ ಸಮಾನತೆಯಿಂದ ಬದುಕುವಂತೆ ಮಾಡುವಲ್ಲಿ ಜಿಲ್ಲಾಡಳಿತಗಳು ವಿಫಲವಾಗಿವೆ. ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಂಬೇಡ್ಕರ್, ಬಾಬು ಜಗಜೀವನ ರಾಮ್ ಭವನ ನಿರ್ಮಾಣಕ್ಕೆ ಹಣ ಬಿಡುಗಡೆಗೊಳಿಸಿದ್ದರೂ ಕೆಲಸ ಮಾತ್ರ ಅರ್ಧಕ್ಕೆ ನಿಂತಿದೆ’ ಎಂದು ದೂರಿದರು.

‘ಹಿಂದುಳಿದ ವರ್ಗಕ್ಕೆ ಸೇರಿದ ವಡ್ಡರ, ಲಂಬಾಣಿ , ಕೊರಚ ಕೊರವ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಲು ಹೈಕೋರ್ಟ್‌ ಆದೇಶ ನೀಡಿದ್ದರೂ ಜಾರಿಗೊಳಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಬೀಮಲಿಂಗಪ್ಪ, ಉಪಾಧ್ಯಕ್ಷ ಹುಸೇನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಚ್.ಗಂಗಾಧರ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಹೆಚ್.ವೀರೇಶ್, ತಾಯಪ್ಪ, ಹುಲುಗಪ್ಪ, ಪೃಥ್ವಿರಾಜ್, ಮಲ್ಲಿಕಾರ್ಜುನ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !