ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲಾಪುರ ಪಟ್ಟಣ ಪಂಚಾಯಿತಿ: 103 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ 29ರಂದು

ಮತದಾನ
Last Updated 28 ಮೇ 2019, 9:10 IST
ಅಕ್ಷರ ಗಾತ್ರ

ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಪಟ್ಟಣ ಪಂಚಾಯಿತಿಗೆ ಬುಧವಾರ (ಮೇ 29) ಮತದಾನ ನಡೆಯಲಿದೆ.

ಪಂಚಾಯಿತಿಯ ಒಟ್ಟು 20 ವಾರ್ಡ್‌ಗಳಿಗೆ ಬೆಳಿಗ್ಗೆ ಏಳರಿಂದ ಸಂಜೆ ಐದರ ವರೆಗೆ ಮತದಾನ ಜರುಗಲಿದೆ. 20 ವಾರ್ಡ್‌ಗಳಿಗೆ ತಲಾ ಒಂದೊಂದು ಮತಗಟ್ಟೆ ಸ್ಥಾಪಿಸಲಾಗಿದೆ.

20 ವಾರ್ಡ್‌ಗಳಿಗೆ ಒಟ್ಟು 103 ಜನ ಸ್ಪರ್ಧಿಸುತ್ತಿದ್ದಾರೆ. ಅವರ ಭವಿಷ್ಯ ಮತದಾರರು ಬುಧವಾರ ನಿರ್ಧರಿಸುವರು. ಒಟ್ಟು 20,649 ಮತದಾರರನ್ನು ಹೊಂದಿರುವ ಪಂಚಾಯಿತಿಯಲ್ಲಿ 10,701 ಮಹಿಳೆಯರು, 9,943 ಪುರುಷರು ಹಾಗೂ ಐದು ಜನ ಇತರೆ ಮತದಾರರಿದ್ದಾರೆ. ಮೇ 31ರಂದು ಫಲಿತಾಂಶ ಹೊರಬೀಳಲಿದೆ.

ಈ ಹಿಂದಿನ ಎರಡು ಅವಧಿಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಮೂರನೇ ಸಲ ಗೆಲುವು ಸಾಧಿಸಿ ಹ್ಯಾಟ್ರಿಕ್‌ ಬಾರಿಸುವ ಉಮೇದಿನಲ್ಲಿ ಕಾಂಗ್ರೆಸ್‌ ಮುಖಂಡರಿದ್ದಾರೆ. ಇನ್ನೊಂದೆಡೆ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಹುಮ್ಮಸ್ಸಿನಲ್ಲಿದೆ. ಮೋದಿ ಅಲೆಯಲ್ಲಿ ಇನ್ನೊಂದು ಗೆಲುವು ದಾಖಲಿಸುವ ವಿಶ್ವಾಸದಲ್ಲಿದೆ. ಜೆ.ಡಿ.ಎಸ್‌. ಕೂಡ ತನ್ನ ಶಕ್ತಿಯನ್ನು ಪಣಕ್ಕಿಟ್ಟಿದೆ. ಕೇವಲ ಎಂಟು ಕ್ಷೇತ್ರಗಳಿಗಷ್ಟೇ ಅಭ್ಯರ್ಥಿಗಳನ್ನು ಪಕ್ಷ ಕಣಕ್ಕಿಳಿಸಿದೆ. ಮೂರೂ ಪಕ್ಷಗಳಿಗೂ ಪಕ್ಷೇತರರು ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾರೆ.

29ರಂದು ರಜೆ

ಚುನಾವಣೆ ನಿಮಿತ್ತ ಕಮಲಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ–ಕಾಲೇಜುಗಳಿಗೆ ಸರ್ಕಾರ ಬುಧವಾರ ರಜೆ ಘೋಷಿಸಿದೆ.

ಸಾರ್ವಜನಿಕ ಉದ್ದಿಮೆಗಳು, ಕಂಪೆನಿಗಳು, ಖಾಸಗಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾಯಂ ಹಾಗೂ ದಿನಗೂಲಿ ನೌಕರರಿಗ ವೇತನ ಸಹಿತ ರಜೆ ಕೊಟ್ಟು ಹಕ್ಕು ಚಲಾಯಿಸಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT