ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟೊ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ನಿಗದಿಗಿಂತ ಹೆಚ್ಚಿನ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೊ ವಶಕ್ಕೆ
Last Updated 19 ಜೂನ್ 2019, 14:41 IST
ಅಕ್ಷರ ಗಾತ್ರ

ಹೊಸಪೇಟೆ: ನಿಗದಿಗಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ 18 ಆಟೊಗಳನ್ನು ಸಂಚಾರ ಪೊಲೀಸರು ಬುಧವಾರ ನಗರದಲ್ಲಿ ವಶಕ್ಕೆ ತೆಗೆದುಕೊಂಡರು.

ಮಂಗಳವಾರ 11 ಆಟೊಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಗರದ ಬಸ್‌ ನಿಲ್ದಾಣ, ರೋಟರಿ ವೃತ್ತ, ಕಾಲೇಜು ರಸ್ತೆಯಲ್ಲಿ ಸಂಚಾರ ಪೊಲೀಸರು, ಆಟೊಗಳನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಆಟೊಗಳನ್ನು ವಶಕ್ಕೆ ಪಡೆದರು.

’ಒಂದು ತಿಂಗಳಿಂದ ಈ ಅಭಿಯಾನ ನಡೆಸಲಾಗುತ್ತಿದೆ. ಹೆಚ್ಚಿನ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ 75 ಗೂಡ್ಸ್‌ ಆಟೊಗಳನ್ನು ಒಂದು ತಿಂಗಳ ಅವಧಿಯಲ್ಲಿ ವಶಕ್ಕೆ ಪಡೆಯಲಾಗಿದೆ. ದಂಡ ವಿಧಿಸಿ, ಎಲ್ಲ ಆಟೊ ಚಾಲಕರಿಗೆ ಎಚ್ಚರಿಕೆ ನೀಡಲಾಗಿದೆ‘ ಎಂದು ಸಂಚಾರ ಪೊಲೀಸ್‌ ಇನ್‌ಸ್ಪೆಕ್ಟರ್‌ ಅಯ್ಯನಗೌಡ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

’ಈ ಕುರಿತು ಆಟೊ ಯೂನಿಯನ್‌, ಶಾಲೆಗಳಿಗೆ ಪತ್ರ ಬರೆಯಲಾಗಿದೆ. ಆಟೊ ಚಾಲಕರಿಗೆ ಮಾಹಿತಿ ಜತೆಗೆ ಎಚ್ಚರಿಕೆ ಕೂಡ ಕೊಡಲಾಗಿದೆ. ಈ ಅಭಿಯಾನ ಮುಂದುವರೆಯಲಿದೆ‘ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT