ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಚಾರ ನಿಯಮ ಮೀರಿದರೆ ಕಾನೂನು ಕ್ರಮ: ಡಿವೈಎಸ್ಪಿ ವಿ. ರಘುಕುಮಾರ

Last Updated 28 ಜನವರಿ 2021, 7:26 IST
ಅಕ್ಷರ ಗಾತ್ರ

ಹೊಸಪೇಟೆ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಪ್ರಯುಕ್ತ ರಸ್ತೆ ಸುರಕ್ಷತಾ ಜಾಥಾ ಗುರುವಾರ ನಗರದಲ್ಲಿ ನಡೆಯಿತು.

ನಗರದ ಮಹಾತ್ಮ ಗಾಂಧಿ ವೃತ್ತದ ಬಳಿ ಡಿವೈಎಸ್ಪಿ ವಿ. ರಘುಕುಮಾರ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾವು ಪುಣ್ಯಮೂರ್ತಿ ವೃತ್ತ, ಬಸ್‌ ನಿಲ್ದಾಣ, ರೋಟರಿ ವೃತ್ತದ ಮೂಲಕ ಹಾದು ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಕೊನೆಗೊಂಡಿತು.

ಇದಕ್ಕೂ ಮುನ್ನ ಮಾತನಾಡಿದ ರಘುಕುಮಾರ, ‘ಎಲ್ಲರೂ ರಸ್ತೆ ನಿಯಮಗಳನ್ನು ಚಾಚೂತಪ್ಪದೇ ಪಾಲಿಸಬೇಕು. ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ವಾಹನಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಜತೆಯಲ್ಲಿ ಇಟ್ಟುಕೊಳ್ಳಬೇಕು. ಸಂಚಾರ ಪೊಲೀಸರು ಕೇಳಿದಾಗ ತೋರಿಸಿ, ಸಹಕರಿಸಬೇಕು. ಇನ್ನು ಕೆಲವು ದಿನಗಳ ವರೆಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಅದಾದ ನಂತರ ನಿಯಮ ಮೀರಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದರು.

ಸಂಚಾರ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಮಹಾಂತೇಶ ಈ. ಸಜ್ಜನ್‌, ಪ್ರಾದೇಶಿಕ ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಮಲ್ಲಿಕಾರ್ಜುನ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ ಕುಮಾರ, ಸಚಿವ ಆನಂದ್‌ ಸಿಂಗ್‌ ಅವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್‌, ಆರ್‌ಟಿಒ, ಪೊಲೀಸ್‌, ಗೃಹರಕ್ಷಕ ದಳ, ಎನ್‌ಸಿಸಿ ಕೆಡೆಟ್‌ಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT