ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ಕನ್ನಡ ವಿಶ್ವವಿದ್ಯಾಲಯ: ಗುಣಾಂಕ ಪದ್ಧತಿ ತರಬೇತಿ ಕಾರ್ಯಕ್ರಮ

Last Updated 4 ಫೆಬ್ರುವರಿ 2021, 12:08 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಗುರುವಾರ ಒಂದು ದಿನದ ‘ಆಯ್ಕೆ ಆಧಾರಿತ ಗುಣಾಂಕ ಪದ್ಧತಿ’ (ಸಿಬಿಸಿಎಸ್) ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಹಿಳಾ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಈ. ಯರ್ರಿಸ್ವಾಮಿ ಅವರು, ಸಿಬಿಸಿಎಸ್ ಪಠ್ಯಕ್ರಮ, ಗ್ರೇಡಿಂಗ್ ಸಿಸ್ಟಂ ಕುರಿತು ಮಾಹಿತಿ ನೀಡಿದರು. ಪ್ರಶ್ನೋತ್ತರದ ರೂಪದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ವಿಷಯ ಮನದಟ್ಟು ಮಾಡಿಕೊಟ್ಟರು.

ಕನ್ನಡ ವಿಶ್ವವಿದ್ಯಾಲಯದ ಕನ್ನಡ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಮಹಿಳಾ ಅದ್ಯಯನ, ದೃಶ್ಯಕಲೆ, ಸಂಗೀತ ಮತ್ತು ಯೋಗ ವಿಷಯಗಳ ಸ್ನಾತಕೋತ್ತರ ಪದವಿಯ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಐಕ್ಯುಎಸಿ ನಿರ್ದೇಶಕ ಎ.ಮೋಹನ ಕುಂಟಾರ್, ಸಹಾಯಕ ನಿರ್ದೇಶಕ ಡಿ. ಪ್ರಭಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT