ಶನಿವಾರ, ಜುಲೈ 31, 2021
21 °C

ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಂಗಭದ್ರಾ ಜಲಾಶಯ–ಸಂಗ್ರಹ ಚಿತ್ರ

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಸೋಮವಾರ ಭಾರಿ ಹೆಚ್ಚಳ ಕಂಡಿದೆ.

ಸದ್ಯ 33,022 ಕ್ಯುಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ವಾರದ ನಂತರ ಭಾನುವಾರ ಒಳಹರಿವು ಹೆಚ್ಚಾಗಿತ್ತು. 17,138 ಕ್ಯುಸೆಕ್‌ ಒಳಹರಿವು ಭಾನುವಾರ ದಾಖಲಾಗಿತ್ತು. 24 ಗಂಟೆಗಳಲ್ಲಿ ಒಳಹರಿವು ಮತ್ತೆ ಭಾರಿ ಏರಿಕೆ ಕಂಡಿದೆ. ಶನಿವಾರ 6,153 ಕ್ಯುಸೆಕ್‌, ಶುಕ್ರವಾರ 6,662 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು.

1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,606.97 ಅಡಿ ನೀರಿನ ಸಂಗ್ರಹವಿದೆ. 'ಎರಡ್ಮೂರು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಉತ್ತಮ ರೀತಿಯಲ್ಲಿ ಮಳೆಯಾಗುತ್ತಿದ್ದು, ಇದರಿಂದಾಗಿ ಒಳಹರಿವು ಏರಿಕೆಯಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗಬಹುದು' ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮೂಲಗಳು ಪ್ರಜಾವಾಣಿಗೆ ತಿಳಿಸಿವೆ.

ಮಳೆ: ಭಾನುವಾರ ತಡರಾತ್ರಿ ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ತಾಲ್ಲೂಕಿನ ಹಂಪಿ, ಕಮಲಾಪುರ, ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಇಪ್ಪಿತ್ತೇರಿ ಮಾಗಾಣಿ, ವ್ಯಾಸನಕೆರೆ, ಸಂಕ್ಲಾಪುರ, ಕಾರಿಗನೂರು, ಮಲಪನಗುಡಿ, ಚಿನ್ನಾಪುರ, ನಲ್ಲಾಪುರ, ವೆಂಕಟಾಪುರದಲ್ಲಿ ಮಳೆಯಾಗಿರುವುದು ವರದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು