ತುಂಗಭದ್ರೆಗೆ 20 ಸಾವಿರ ಕ್ಯುಸೆಕ್‌ ಒಳಹರಿವು

ಶುಕ್ರವಾರ, ಜೂಲೈ 19, 2019
28 °C

ತುಂಗಭದ್ರೆಗೆ 20 ಸಾವಿರ ಕ್ಯುಸೆಕ್‌ ಒಳಹರಿವು

Published:
Updated:

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದು, ಅಣೆಕಟ್ಟೆಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಪ್ರಸ್ತುತ 20,560 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಲ್ಲಿ ನೀರಿನ ಸಂಗ್ರಹ ಮಟ್ಟ ಏರಿಕೆಯಾಗಿದೆ. ಸದ್ಯ 7.02 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿದೆ.

ಗುರುವಾರ 12,932 ಕ್ಯುಸೆಕ್‌ ಒಳಹರಿವು ಇತ್ತು. 5.25 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿತ್ತು. ಆದರೆ, ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ 24 ಗಂಟೆಗಳಲ್ಲಿ ಸುಮಾರು ಎರಡು ಟಿ.ಎಂ.ಸಿ. ಅಡಿ ನೀರು ಹರಿದು ಬಂದಿದೆ.

‘ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದ್ದು, ಬರುವ ದಿನಗಳಲ್ಲಿ ಒಳಹರಿವು ಇನ್ನಷ್ಟು ಹೆಚ್ಚಾಗಬಹುದು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.

 

 

 

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !