ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ತುಂಗಭದ್ರಾ ಒಳಹರಿವು ಭಾರಿ ಹೆಚ್ಚಳ

Last Updated 5 ಮೇ 2021, 8:01 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಹೆಚ್ಚಳವಾಗಿದೆ.

ಒಂದು ವಾರದಿಂದ ಜಲಾಶಯಕ್ಕೆ ಸರಾಸರಿ 2,000 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಮಂಗಳವಾರ ಗಣನೀಯವಾಗಿ ತಗ್ಗಿತ್ತು. ಆದರೆ, ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಒಳಹರಿವು ಮತ್ತೆ ಭಾರಿ ಹೆಚ್ಚಳವಾಗಿದೆ.

ಬುಧವಾರ 4,338 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಬೇಸಿಗೆಯಲ್ಲಿ ದಾಖಲಾದ ಅತಿ ಹೆಚ್ಚು ಒಳಹರಿವು ಇದು. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,578.87 ಅಡಿ ನೀರಿನ ಸಂಗ್ರಹವಿದೆ. 214 ಕ್ಯುಸೆಕ್‌ ನೀರು ಕಾಲುವೆಗೆ ಹರಿಸಲಾಗುತ್ತಿದೆ.

ತಾಪಮಾನದಲ್ಲಿ ಭಾರಿ ಏರಿಕೆಯಿಂದ ನೀರು ಆವಿಯಾಗಿ ಸತತವಾಗಿ ನೀರಿನ ಸಂಗ್ರಹ ಕಡಿಮೆಯಾಗುತ್ತಿತ್ತು. ಈಗ ವಾರದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದು, ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿನ ಸಮಸ್ಯೆ ನೀಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT