ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಗ್ಗಿದ ತುಂಗಭದ್ರಾ ಹೊರಹರಿವು

Last Updated 23 ಅಕ್ಟೋಬರ್ 2019, 11:57 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು, ಹೊರಹರಿವು ಬುಧವಾರ ಸ್ವಲ್ಪ ಪ್ರಮಾಣದಲ್ಲಿ ತಗ್ಗಿದೆ.

ಸದ್ಯ ಅಣೆಕಟ್ಟೆಗೆ 1,52,100 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, 1,54,000 ಕ್ಯುಸೆಕ್‌ ನೀರು ಹೊರಬಿಡಲಾಗುತ್ತಿದೆ. ಮಂಗಳವಾರ 1,55,431 ಕ್ಯುಸೆಕ್‌ ಒಳಹರಿವು, 1,75,000 ಕ್ಯುಸೆಕ್‌ ಹೊರಹರಿವು ಇತ್ತು.

ನದಿಯಲ್ಲಿ ನೀರಿನ ಹರಿವು ತಗ್ಗಿದರೂ ಇನ್ನೂ ತಾಲ್ಲೂಕಿನ ಹಂಪಿ ಪುರಂದರ ಮಂಟಪ, ವಿಜಯನಗರದ ಕಾಲದ ಕಾಲು ಸೇತುವೆ, ಚಕ್ರತೀರ್ಥ ನೀರಿನಲ್ಲೇ ಇವೆ. ರಾಮ ಲಕ್ಷ್ಮಣ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ.

ಸತತ ನಾಲ್ಕೈದು ದಿನಗಳಿಂದ ಸುರಿಯುತ್ತಿದ್ದ ಮಳೆ ಬುಧವಾರ ಸ್ವಲ್ಪ ಬಿಡುವು ನೀಡಿದೆ. ದಿನವಿಡೀ ಬಿಸಿಲು ಇತ್ತು. ಸಂಜೆ ಕೆಲ ನಿಮಿಷ ಅಲ್ಲಲ್ಲಿ ತುಂತುರು ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT