ಸೋಮವಾರ, ನವೆಂಬರ್ 30, 2020
20 °C

ಅನುಮತಿ ನಿರಾಕರಿಸಿದರೂ ಪುಷ್ಕರ ಪುಣ್ಯಸ್ನಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಜಿಲ್ಲಾಡಳಿತವು ‘ತುಂಗಭದ್ರಾ ನದಿ ಪುಷ್ಕರ ಮಹೋತ್ಸವ’ ಆಯೋಜಿಸಲು ಅನುಮತಿ ನಿರಾಕರಿಸಿದ್ದರೂ ಸಹ ಶುಕ್ರವಾರ ತಾಲ್ಲೂಕಿನ ಹಂಪಿ ತುಂಗಭದ್ರಾ ನದಿಯಲ್ಲಿ ಜನ ಪುಣ್ಯ ಸ್ನಾನ ಮಾಡಿದರು.

ಕಿರಿಯರಿಂದ ಹಿರಿಯರವರೆಗೆ ಎಲ್ಲ ವಯೋಮಾನದವರು ತುಂಗೆಯಲ್ಲಿ ಮಿಂದೆದ್ದರು. ಬಳಿಕ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿರೂಪಾಕ್ಷನ ದರ್ಶನ ಪಡೆದರು. ನಂತರ ಹಂಪಿ ಸ್ಮಾರಕಗಳನ್ನು ಕಣ್ತುಂಬಿಕೊಂಡರು.

ಅಖಿಲ ಕರ್ನಾಟಕ ಕಮ್ಮವಾರಿ ಸಂಘವು ನ. 20ರಿಂದ ಡಿ. 1ರ ವರೆಗೆ ಪುಷ್ಕರ ಆಯೋಜಿಸಲು ಜಿಲ್ಲಾಡಳಿತಕ್ಕೆ ಕೋರಿತ್ತು. ಆದರೆ, ಕೋವಿಡ್‌ ಕಾರಣಕ್ಕಾಗಿ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ‘ಪುಷ್ಕರ ಇದೆ ಎಂದು ವ್ಯಾಪಕ ಪ್ರಚಾರವಾಗಿತ್ತು. ಹೀಗಾಗಿ ಕೆಲವರು ಬಂದು ನದಿಯಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಜನಜಾತ್ರೆ ಇರಲಿಲ್ಲ’ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿ ಎಂ.ಎಚ್‌. ಪ್ರಕಾಶ್‌ ರಾವ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಇದನ್ನೂ ಓದಿ: 


ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸುತ್ತಿರುವುದು

ನದಿಗೆ ನೀರು: ಕಂಪ್ಲಿ, ಸಿರುಗುಪ್ಪ ಸೇರಿದಂತೆ ಹಲವೆಡೆ ನದಿ ದಂಡೆಯಲ್ಲಿ ಪುಷ್ಕರ ಹಮ್ಮಿಕೊಂಡಿದ್ದರಿಂದ ಶುಕ್ರವಾರ ಇಲ್ಲಿಗೆ ಸಮೀಪದ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿದೆ. ನದಿಗೆ 3,000 ಕ್ಯುಸೆಕ್‌ ನೀರು ಬಿಡಲಾಗುತ್ತಿದೆ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು