ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ತಾಸು ಜಿಟಿಜಿಟಿ ಮಳೆ

Last Updated 22 ಜುಲೈ 2019, 13:01 IST
ಅಕ್ಷರ ಗಾತ್ರ

ಹೊಸಪೇಟೆ: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಸೋಮವಾರ ಎರಡು ಗಂಟೆಗೂ ಅಧಿಕ ಸಮಯ ಜಿಟಿಜಿಟಿ ಮಳೆಯಾಯಿತು.

ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಆರಂಭವಾದ ಮಳೆ ಐದು ಗಂಟೆಯ ವರೆಗೆ ನಿರಂತರವಾಗಿ ಸುರಿಯಿತು. ಮಧ್ಯಾಹ್ನ ಆರಂಭವಾದ ಮಳೆ ಸಂಜೆಯಾದರೂ ನಿಲ್ಲದ ಕಾರಣ ಶಾಲಾ–ಕಾಲೇಜಿನ ವಿದ್ಯಾರ್ಥಿಗಳು, ದೈನಂದಿನ ಕೆಲಸ ಮುಗಿಸಿಕೊಂಡವರು ಮಳೆಯಲ್ಲೇ ನೆನೆದುಕೊಂಡು ಮನೆಗಳತ್ತ ಹೆಜ್ಜೆ ಹಾಕಿದರು.

ನಗರದ ಚಿತ್ತವಾಡ್ಗಿ, ಕಾಲೇಜು ರಸ್ತೆ, ಮೇನ್‌ ಬಜಾರ್‌ನಲ್ಲಿ ಚಿಣ್ಣರು ಮಳೆಯಲ್ಲಿ ನೆನೆಯುತ್ತ, ರಸ್ತೆ ಮೇಲೆ ನಿಂತ ನೀರಿನಲ್ಲಿ ಆಟವಾಡಿ, ಸಂಭ್ರಮಿಸುತ್ತ ಹೋಗುತ್ತಿರುವುದು ಕಂಡು ಬಂತು.

ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ವ್ಯಾಸನಕೆರೆ, ವಡ್ಡರಹಳ್ಳಿ, ಬೈಲುವದ್ದಿಗೇರಿ, ಧರ್ಮಸಾಗರ, ಕಾಕುಬಾಳು, ಕಮಲಾಪುರ, ಸೀತಾರಾಮ ತಾಂಡಾ, ಮಲಪನಗುಡಿ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿರುವುದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT