ಎರಡು ಸಾವಿರ ಸಸಿ ನೆಡುವ ಕಾರ್ಯಕ್ರಮ

ಮಂಗಳವಾರ, ಜೂನ್ 18, 2019
25 °C
ಜೂನ್‌ 5ರಂದು ಪರಿಸರ ಸಂರಕ್ಷಣೆ ಜನಜಾಗೃತಿ ಜಾಥಾ

ಎರಡು ಸಾವಿರ ಸಸಿ ನೆಡುವ ಕಾರ್ಯಕ್ರಮ

Published:
Updated:

ಹೊಸಪೇಟೆ: ‘ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಇದೇ 5ರಂದು ನಗರದ ವಿವಿಧ ಭಾಗಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ರೋಟರಿ ಕ್ಲಬ್ ಅಧ್ಯಕ್ಷ ಡಾ.ವಾಸುದೇವ ರೆಡ್ಡಿ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 9ಕ್ಕೆ ನಗರದ ರೋಟರಿ ಕ್ಲಬ್‌ ಆವರಣದಿಂದ ರೋಟರಿ ವೃತ್ತದ ವರೆಗೆ ಪರಿಸರ ಸಂರಕ್ಷಣೆ ಕುರಿತು ಜನಜಾಗೃತಿ ಜಾಥಾ ನಡೆಸಲಾಗುವುದು’ ಎಂದು ಮಾಹಿತಿ ನೀಡಿದರು. 

‘ಪರಿಸರದ ಮೇಲೆ ಸತತವಾಗಿ ದಾಳಿ ನಡೆಸುತ್ತಿರುವುದರಿಂದ ತಾಪಮಾನದಲ್ಲಿ ಏರುಪೇರು ಉಂಟಾಗಿದೆ. ಪ್ರತಿ ವರ್ಷ ಉಷ್ಣತೆ ಹೆಚ್ಚಾಗುತ್ತಿದೆ. ಸಕಾಲಕ್ಕೆ ಮಳೆಯಾಗುತ್ತಿಲ್ಲ. ಇಷ್ಟೆಲ್ಲ ಆಗುತ್ತಿದ್ದರೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಭವಿಷ್ಯದಲ್ಲಿ ಗಂಡಾಂತರ ಖಚಿತ. ಹೀಗಾಗಿ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ’ ಎಂದು ವಿವರಿಸಿದರು.

‘ಶಾಲಾ–ಕಾಲೇಜು ಹಾಗೂ ಯುವಕರ ತಂಡಗಳೊಂದಿಗೆ ನಗರದ ವಿವಿಧ ಭಾಗಗಳಲ್ಲಿ ಸಸಿಗಳನ್ನು ನೆಡಲಾಗುವುದು. ಬಳಿಕ ಅವುಗಳು ಬೆಳೆದು ದೊಡ್ಡದಾಗುವವರೆಗೆ ಪೋಷಣೆ ಮಾಡಲಾಗುವುದು. ನಗರದ ಎಲ್ಲ ನಾಗರಿಕರು ಈ ಕೆಲಸಕ್ಕೆ ಸಹಕಾರ ಕೊಡಬೇಕು’ ಎಂದು ಮನವಿ ಮಾಡಿದರು.

‘ಗ್ರೀನ್ ಹೊಸಪೇಟೆ ಸಂಸ್ಥೆ’ಯ ಅಧ್ಯಕ್ಷ ಸುನೀಲ್ ಗೌಡ ಮಾತನಾಡಿ, ‘ಪರಿಸರ ದಿನಾಚರಣೆ ಜಾಗೃತಿ ಜಾಥಾ ಕುರಿತು ಈಗಾಗಲೇ ಸಾಕಷ್ಟು ಪ್ರಚಾರ ಮಾಡಲಾಗಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಾರ್ವಜನಿಕರು ಕೂಡ ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಈ ಕೆಲಸಕ್ಕೆ ಬೆಂಬಲ ಕೊಡಬೇಕು’ ಎಂದು ಕೋರಿದರು.

ಸಂಸ್ಥೆಯ ಸುನೀಲ್ ಗೌಡ, ನಾಗೇಶ್, ಮಲ್ಲೇಶ್, ದೀಪಕ್ ಕುಮಾರ್, ಜೆಸ್ಕಾಂ ಜಾಗೃತ ದಳದ ಇನ್‌ಸ್ಪೆಕ್ಟರ್‌ ಕೆ.ಜಿ. ಗೋವಿಂದರಾಜು ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !