ಹಂಪಿಯಲ್ಲಿ ಇಬ್ಬರು ಮಹಿಳೆಯರು ವಿಷ ಸೇವಿಸಿ ಆತ್ಮಹತ್ಯೆ
ಹೊಸಪೇಟೆ: ಇಲ್ಲಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ರಥಬೀದಿಯ ಸಾಲು ಮಂಟಪದಲ್ಲಿ ಇಬ್ಬರು ಮಹಿಳೆಯರು ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
‘ಮಹಿಳೆಯರಿಬ್ಬರ ವಯಸ್ಸು 40ರಿಂದ 45 ವರ್ಷ ಒಳಗೆ ಇರಬಹುದು. ಮಹಿಳೆಯರ ಹೆಸರು, ವಿಳಾಸ ಪತ್ತೆ ಹಚ್ಚುವ ಕೆಲಸ ನಡೆದಿದೆ. ಅವರ ಆತ್ಮಹತ್ಯೆಗೆ ಇನ್ನಷ್ಟೇ ಕಾರಣ ಗೊತ್ತಾಗಬೇಕಿದೆ. ಇಬ್ಬರ ಮೃತದೇಹಗಳನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದು ಹಂಪಿ ಪೊಲೀಸರು ತಿಳಿಸಿದ್ದಾರೆ.
ತುಂಗಭದ್ರಾ ನದಿ ಪುಷ್ಕರ ಮಹೋತ್ಸವದ ನಿಮಿತ್ತ ನದಿಯಲ್ಲಿ ಪುಣ್ಯಸ್ನಾನಕ್ಕೆಂದು ಸೋಮವಾರ ಸಾವಿರಾರು ಜನ ಹಂಪಿಗೆ ಬಂದಿದ್ದರು. ಅಷ್ಟೊಂದು ಜನರ ನಡುವೆಯೇ ಈ ಘಟನೆ ನಡೆದಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.