ಗುರುವಾರ , ಫೆಬ್ರವರಿ 25, 2021
29 °C

ಅನಧಿಕೃತವಾಗಿ ಪಾಸ್‌ ವಿತರಣೆ: ಸಬ್‌ ಇನ್‌ಸ್ಪೆಕ್ಟರ್‌ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಅನಧಿಕೃವಾಗಿ ಸಾರ್ವಜನಿಕರಿಗೆ ಪಾಸ್‌ಗಳನ್ನು ವಿತರಿಸಿದ್ದ ಇಲ್ಲಿನ ಟಿ.ಬಿ. ಡ್ಯಾಂ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ನಾಗಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. 

‘ಲಾಕ್‌ಡೌನ್‌ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಂಚರಿಸಲು ಜಿಲ್ಲಾಡಳಿತದಿಂದ ಪಾಸ್‌ ವಿತರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ಗಳು ಬಿಟ್ಟರೆ ಬೇರೆಯವರಿಗೆ ಪಾಸ್‌ ಕೊಡುವ ಅಧಿಕಾರವಿಲ್ಲ. ಆದರೆ, ನಾಗಪ್ಪ ಪಾಸ್‌ ವಿತರಿಸಿದ್ದಾರೆ. ಹೀಗಾಗಿ ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ನಾಗಪ್ಪ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು