ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಷ್ಠರೋಗ ಸೋಂಕು ನಿರ್ಮೂಲನೆಗೆ ಸೂಚನೆ

Last Updated 3 ಸೆಪ್ಟೆಂಬರ್ 2022, 16:46 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಕುಷ್ಠರೋಗ ಶಂಕಿತ ಪ್ರಕರಣಗಳನ್ನು ಪತ್ತೆ ಹಚ್ಚಬೇಕು. ದೃಢಪಟ್ಟ ಪ್ರಕರಣಗಳನ್ನು ಚಿಕಿತ್ಸೆಗೆ ಒಳಪಡಿಸಿ ಸೋಂಕು ನಿರ್ಮೂಲನೆಗೆ ಶ್ರಮಿಸಬೇಕು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ತಿಳಿಸಿದರು.

ಶುಕ್ರವಾರ ನಗರದಲ್ಲಿ ನಡೆದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಮನೆ ಮನೆಗೆ ಭೇಟಿ ನೀಡಿ ಕುಷ್ಠರೋಗ ಪತ್ತೆ ಹಚ್ಚಬೇಕು. ಜಿಲ್ಲೆಯಾದ್ಯಂತ ಸೆ.12 ರಿಂದ ಸೆ.29ರ ವರೆಗೆ ಅಭಿಯಾನ ನಡೆಯಲಿದೆ. ಎಲ್ಲರೂ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕೆಂದು ಸೂಚಿಸಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಭಾಸ್ಕರ್, ಅಭಿಯಾನಕ್ಕೆ 1,104 ತಂಡಗಳನ್ನು ರಚಿಸಲಾಗಿದೆ. 220 ಜನ ಮೇಲ್ವಿಚಾರಕರು ಹಾಗೂ 1,990 ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ತಂಡ ರಚಿಸಲಾಗಿದೆ ಎಂದು ತಿಳಿಸಿದರು.

ಡಿ.ಎಚ್‌.ಒ. ಡಾ.ಸಲೀಂ, ಆರ್.ಸಿ.ಎಚ್.ಒ ಡಾ.ಜಂಬಯ್ಯ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಾಲ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT