ಶನಿವಾರ, ಜೂನ್ 19, 2021
28 °C

18 ವರ್ಷ ಮೇಲಿನ 200 ಜನಕ್ಕೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಎಂಟು ಕೇಂದ್ರಗಳಲ್ಲಿ ಕೊರೊನಾ ಲಸಿಕೆ ಹಾಕುವ ಪ್ರಕ್ರಿಯೆ ಮುಂದುವರೆದಿದ್ದು, ಮಂಗಳವಾರ 18 ವರ್ಷ ಮೇಲಿನವರಿಗೂ ಲಸಿಕೆ ಹಾಕಲಾಯಿತು.

ಮೊದಲ ದಿನ 18 ವರ್ಷ ವಯಸ್ಸಿನ 200 ಜನರಿಗೆ ಲಸಿಕೆ ನೀಡಲಾಗಿದೆ. ಅದೇ ರೀತಿ ಮೊದಲ ಡೋಸ್‌ ಪಡೆದ 45 ವರ್ಷ ಮೇಲಿನವರಿಗೆ ಎರಡನೇ ಡೋಸ್‌ ಕೂಡ ನೀಡಲಾಗುತ್ತಿದೆ.

‘ಎಲ್ಲ ಕೇಂದ್ರಗಳಲ್ಲಿ ಲಸಿಕೆ ಲಭ್ಯ ಇದೆ. 18 ವರ್ಷ ಮೇಲಿನ ಎಲ್ಲರಿಗೂ ಲಸಿಕೆ ಕೊಡಲಾಗುತ್ತಿದೆ. ಇದುವರೆಗೆ ತಾಲ್ಲೂಕಿನಲ್ಲಿ 55,671 ಜನರಿಗೆ ಲಸಿಕೆ ನೀಡಲಾಗಿದೆ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು