ಸೋಮವಾರ, ಸೆಪ್ಟೆಂಬರ್ 27, 2021
26 °C

ಹೊಸಪೇಟೆ: ಲಸಿಕೆ ಪಡೆದ ಶಿಕ್ಷಕರು, ನೌಕರರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯ ಕರ್ತವ್ಯ ಸೇರಿದಂತೆ ಇತರೆ ಕೆಲಸಕ್ಕೆ ನಿಯೋಜನೆಗೊಳ್ಳಲಿರುವ ಶಿಕ್ಷಕರು, ಉಪನ್ಯಾಸಕರು ಹಾಗೂ ‘ಡಿ’ ಗ್ರೂಪ್‌ ನೌಕರರಿಗೆ ಭಾನುವಾರ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಕೋವಿಡ್‌ ಲಸಿಕೆ ನೀಡಲಾಯಿತು.

ವಿವಿಧ ಕಡೆಗಳಿಂದ ಬಂದಿದ್ದ ಜನರು ಆಧಾರ್‌ ಕಾರ್ಡ್‌, ಶಿಕ್ಷಣ ಸಂಸ್ಥೆಯ ಗುರುತಿನ ಕಾರ್ಡ್‌ಗಳನ್ನು ತೋರಿಸಿ, ಸಾಲಿನಲ್ಲಿ ನಿಂತುಕೊಂಡು ಲಸಿಕೆ ಪಡೆದರು. ಬೆಳಿಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿತ್ತು. ಆದರೆ, ಅದನ್ನು ಲೆಕ್ಕಿಸದೇ ಜನ ಉತ್ಸಾಹದಿಂದ ಲಸಿಕೆ ಪಡೆದರು.

ಬೆಳಿಗ್ಗೆ 9.30ಕ್ಕೆ ಲಸಿಕೆ ಹಾಕುವ ಕೆಲಸ ಆರಂಭಗೊಂಡಿತು. ಅಷ್ಟರಲ್ಲಾಗಲೇ ಶಿಕ್ಷಕರು, ಉಪನ್ಯಾಸಕರು ಹಾಗೂ ನೌಕರರು ಬಂದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು