ಸಂಭ್ರಮದಿಂದ ವಾಸವಿ ದೇವಿ ಜಯಂತಿ

ಸೋಮವಾರ, ಮೇ 20, 2019
30 °C

ಸಂಭ್ರಮದಿಂದ ವಾಸವಿ ದೇವಿ ಜಯಂತಿ

Published:
Updated:
Prajavani

ಹೊಸಪೇಟೆ: ಆರ್ಯ ವೈಶ್ಯ ಸಂಘದಿಂದ ಮಂಗಳವಾರ ನಗರದಲ್ಲಿ ವಾಸವಿ ದೇವಿ ಜಯಂತಿಯನ್ನು ಶ್ರದ್ಧಾ, ಭಕ್ತಿ ಹಾಗೂ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ವಾಸವಿ ದೇವಿಗೆ ಬೆಳಿಗ್ಗೆ ವಿಶೇಷ ಅಭಿಷೇಕ, ಅಲಂಕಾರ ಮಾಡಿ ನೈವೇದ್ಯ ಸಮರ್ಪಿಸಲಾಯಿತು. ನಂತರ ನಗರೇಶ್ವರ ದೇವಸ್ಥಾನದಿಂದ ವಾಸವಿ ದೇವಸ್ಥಾನದ ವರೆಗೆ ಪೂರ್ಣಕುಂಭ ಕಲಶ ಮೆರವಣಿಗೆ ನಡೆಯಿತು. ಸಮಾಜದ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.

ಬಳಿಕ ದೇವಸ್ಥಾನದಲ್ಲಿ ವಾಸವಿ ದೇವಿ ತೊಟ್ಟಿಲು, ಮಡಿಲಕ್ಕಿ ಸಮರ್ಪಣೆ, ತುಲಾಭಾರ, ಹೋಮ–ಹವನ, ಮಹಾಮಂಗಳಾರತಿ, ಪ್ರಸಾದ ನಡೆಯಿತು. ಇದೇ ವೇಳೆ ಹಮ್ಮಿಕೊಂಡಿದ್ದ ಶಿಬಿರದಲ್ಲಿ 20ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು. 

ನಂತರ ನಡೆದ ಸಭಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಆರ್ಯವೈಶ್ಯ ಸಂಘದ ಗೌರವ ಅಧ್ಯಕ್ಷ ಭೂಪಾಳ್‌ ರಾಘವೇಂದ್ರ ಶೆಟ್ಟಿ, ‘ಸಮುದಾಯದಲ್ಲಿ ಅನೇಕ ಜನ ಪ್ರತಿಭಾವಂತರಿದ್ದಾರೆ. ಆರ್ಥಿಕ ಸಮಸ್ಯೆಯಿಂದ ಉನ್ನತ ವ್ಯಾಸಂಗ ಮಾಡಲು ಸಾಧ್ಯವಾಗುತ್ತಿಲ್ಲ. ಅಂತಹವರಿಗೆ ಆರ್ಥಿಕ ನೆರವು ನೀಡಬೇಕಿದೆ’ ಎಂದರು.

ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಆರ್ಯವೈಶ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮಶೇಖರ, ವಾಸವಿ ಯುವಜನ ಸಂಘದ ಅಧ್ಯಕ್ಷ ಜೆ.ವೆಂಕಣ್ಣ ಶೆಟ್ಟಿ, ಕಾರ್ಯದರ್ಶಿ ವೆಂಕಟೇಶ ಬಾಬು, ಆರ್ಯವೈಶ್ಯ ಮಹಾಮಂಡಳದ ಜಿಲ್ಲಾ ಕಾರ್ಯದರ್ಶಿ ನರಸಿಂಹಮೂರ್ತಿ, ಆರ್ಯವೈಶ್ಯ ಸಂಘದ ಅಧ್ಯಕ್ಷ ಸಂಜೀವಪ್ಪ ಶೆಟ್ಟಿ, ಕಾರ್ಯದರ್ಶಿ ಕುಮಾರಸ್ವಾಮಿ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ರಾಧಾ,  ಭೂಪಾಳ್‌ ಮಂಜುಳಾ, ಘಂಟೆ ವಿಜಯಲಕ್ಷ್ಮಿ ಇದ್ದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !