ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಪತಿಯಿಂದ ಪ್ರಗತಿ ಪರಿಶೀಲನೆ

Last Updated 27 ಮಾರ್ಚ್ 2019, 12:20 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸ.ಚಿ. ರಮೇಶ ಅವರು ಬುಧವಾರ ವಿ.ವಿ.ಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಭಾಷಾ ನಿಕಾಯದ ಕನ್ನಡ ಸಾಹಿತ್ಯ, ಕನ್ನಡ ಭಾಷಾ ಅಧ್ಯಯನ, ದ್ರಾವಿಡ ಸಂಸ್ಕೃತಿ ಅಧ್ಯಯನ, ಭಾಷಾಂತರ ಅಧ್ಯಯನ, ಹಸ್ತಪ್ರತಿಶಾಸ್ತ್ರ, ಮಹಿಳಾ ಅಧ್ಯಯನ ವಿಭಾಗ ಹಾಗೂ ಸಮಾಜ ವಿಜ್ಞಾನಗಳ ನಿಕಾಯದ ಚರಿತ್ರೆ ವಿಭಾಗ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಶಾಸನಶಾಸ್ತ್ರ, ಜಾನಪದ ಅಧ್ಯಯನ, ಅಭಿವೃದ್ಧಿ ಅಧ್ಯಯನ, ಬುಡಕಟ್ಟು ಅಧ್ಯಯನ, ಮಾನವಶಾಸ್ತ್ರ ವಿಭಾಗಗಳು ಮತ್ತು ಲಲಿತಕಲೆಗಳ ನಿಕಾಯದ ಸಂಗೀತ ಮತ್ತು ನೃತ್ಯ ವಿಭಾಗಕ್ಕೆ ಭೇಟಿ ನೀಡಿ 2018–19ನೇ ಸಾಲಿನ ಶೈಕ್ಷಣಿಕ ಪ್ರಗತಿ ಕುರಿತು ಪ್ರಾಧ್ಯಾಪಕರಿಂದ ಮಾಹಿತಿ ಪಡೆದರು. ಅಧ್ಯಯನ ಯೋಜನೆ, ಹೊಸ ಸಂಶೋಧನೆ ಕುರಿತು ಚರ್ಚೆ ನಡೆಸಿದರು.

ಆಯಾ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿ, ಕುಂದು ಕೊರತೆಗಳನ್ನು ಆಲಿಸಿದರು.ಡೀನರಾದ ಕೆ.ಕೇಶವನ್ ಪ್ರಸಾದ್, ಎ.ಸುಬ್ಬಣ್ಣ ರೈ, ಡಿ.ಪಾಂಡುರಂಗಬಾಬು, ಶೈಕ್ಷಣಿಕ ಉಪಕುಲಸಚಿವರಾದ ಎಸ್.ವೈ. ಸೋಮಶೇಖರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT