ಸೋಮವಾರ, ಜೂನ್ 21, 2021
30 °C

ಮಂಗಳವಾರ ರಸ್ತೆಗಿಳಿದ ವಾಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆ ಮನಗಂಡು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಮಂಗಳವಾರ ಬೆಳಿಗ್ಗೆ ನಗರದಲ್ಲಿ ವಾಹನಗಳು ರಸ್ತೆಗಿಳಿದಿದ್ದವು.

ಬೆಳಿಗ್ಗೆ ಆರರಿಂದ ಹತ್ತು ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರ, ನಡೆದುಕೊಂಡು ಹೋಗಬೇಕು ಎಂಬ ನಿಯಮ ಜಾರಿಗೆ ತಂದಿತ್ತು. ಇದರಿಂದಾಗಿ ಗ್ರಾಮೀಣ ಪ್ರದೇಶದವರು, ವಯಸ್ಸಾದವರಿಗೆ ಬಹಳ ಸಮಸ್ಯೆ ಉಂಟಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅದರ ಬಳಿಕ ಸರ್ಕಾರ ತನ್ನ ಆದೇಶ ಹಿಂಪಡೆದಿತ್ತು.

ಈ ವಿಷಯ ತಿಳಿದು ಮಂಗಳವಾರ ಜನ ದ್ವಿಚಕ್ರ ವಾಹನ, ಕಾರುಗಳಲ್ಲಿ ಹೊರಗೆ ಬಂದು ಅಗತ್ಯ ವಸ್ತುಗಳನ್ನು ಖರೀದಿಸಿ ಮನೆ ಸೇರಿದರು. ಸೋಮವಾರ ನಗರದ ಹಲವೆಡೆ ವಾಹನಗಳನ್ನು ವಶಪಡಿಸಿಕೊಂಡಿದ್ದರಿಂದ ಕೆಲವರು ಮಂಗಳವಾರ ಹೊರಗೆ ಕಾಲಿಡಲಿಲ್ಲ. ಆದರೆ, ಮಂಗಳವಾರ ಹೆಚ್ಚಿನ ಜನ ಹಾಗೂ ವಾಹನ ದಟ್ಟಣೆ ಕಂಡು ಬರಲಿಲ್ಲ.

ಹತ್ತು ಗಂಟೆ ಸಮಯ ಆಗುತ್ತಿದ್ದಂತೆ ಬಹುತೇಕರು ಮನೆ ಸೇರಿಕೊಂಡರು. ರಸ್ತೆ ಮೇಲೆ ಓಡಾಡುತ್ತಿದ್ದವರನ್ನು ತಡೆದು ಪೊಲೀಸರು ಕಳುಹಿಸಿದರು. ಬಳಿಕ ಇಡೀ ನಗರ ಸ್ತಬ್ಧಗೊಂಡಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು