ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ತಬ್ಧ

7
ಮೂರು ಗಂಟೆಗೂ ಅಧಿಕ ಸಮಯ ಸಾಲುಗಟ್ಟಿ ನಿಂತ ವಾಹನಗಳು

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ತಬ್ಧ

Published:
Updated:
Deccan Herald

ಹೊಸಪೇಟೆ: ನಗರ ಹೊರವಲಯದ ಗುಂಡಾ ಸಸ್ಯೋದ್ಯಾನ ಸಮೀಪದಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 50ರ ಮೇಲೆ ಬುಧವಾರ ಎರಡು ಗಂಟೆಗೂ ಹೆಚ್ಚು ಕಾಲ ವಾಹನಗಳ ಸಂಚಾರ ಸ್ತಬ್ಧಗೊಂಡಿತ್ತು.

ಹೊಸಪೇಟೆ–ಚಿತ್ರದುರ್ಗ ಮಧ್ಯೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಗುಂಡಾ ಸಸ್ಯೋದ್ಯಾನ ಬಳಿ ಮೇಲ್ಸೇತುವೆ ಹಾಗೂ ರಸ್ತೆ ವಿಸ್ತರಣೆ ಕೆಲಸ ನಡೆಯುತ್ತಿದೆ. ವಾಹನಗಳ ಸಂಚಾರಕ್ಕೆ ರಸ್ತೆ ಕಿರಿದಾಗಿದ್ದು, ಬುಧವಾರ ವಾಹನಗಳು ಎದುರು ಬದುರು ಬಂದು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮೂರು ಗಂಟೆಗೂ ಅಧಿಕ ಸಮಯ ವಾಹನಗಳು ಸಾಲುಗಟ್ಟಿ ನಿಂತಿದ್ದವು.

‘ಬುಧವಾರ ಬೆಳಿಗ್ಗೆ ಎಂಟು ಗಂಟೆಯಿಂದ ಹನ್ನೊಂದು ಗಂಟೆಯ ವರೆಗೆ ರಸ್ತೆಯ ಬದಿಯಲ್ಲೇ ಬಸ್ಸಿನಲ್ಲಿ ಕಾಲ ಕಳೆಯಬೇಕಾಯಿತು. ನಿತ್ಯ ನಗರದಿಂದ ಮರಿಯಮ್ಮನಹಳ್ಳಿಗೆ ಕೆಲಸಕ್ಕೆ ಹೋಗಿ ಬರುತ್ತೇನೆ. ನಿತ್ಯ ಇದೇ ರೀತಿ ಆಗುತ್ತಿದ್ದು, ಸಾಕಷ್ಟು ಸಮಯ ಹಾಳಾಗುತ್ತಿದೆ. ಕಾಮಗಾರಿ ನಿಧಾನ ಗತಿಯಲ್ಲಿ ನಡೆಯುತ್ತಿರುವುದರಿಂದ ಈ ಸಮಸ್ಯೆ ಆಗುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೆ ಸುಗಮ ವಾಹನ ಸಂಚಾರಕ್ಕಾಗಿ ಸಂಚಾರ ಪೊಲೀಸರು ಅಥವಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಯನ್ನು ನೇಮಿಸಬೇಕು’ ಎಂದು ಪ್ರಾಧ್ಯಾಪಕ ಸಮದ್‌ ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !