ಶನಿವಾರ, ಮೇ 28, 2022
24 °C

ವಿಜಯನಗರ ಸಂಸ್ಥಾಪನಾ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಮಲಾಪುರ ಪಟ್ಟಣದಲ್ಲಿ ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಸೇನೆಯಿಂದ ಸೋಮವಾರ ವಿಜಯನಗರ ಸಾಮ್ರಾಜ್ಯದ ಸಂಸ್ಥಾಪನಾ ದಿನ ಆಚರಿಸಲಾಯಿತು.

ಪಟ್ಟಣದ ಶ್ರೀ ಕೃಷ್ಣದೇವರಾಯ ಮತ್ತು ಮಹರ್ಷಿ ವಾಲ್ಮೀಕಿ ವೃತ್ತಕ್ಕೆ ತೆರಳಿದ ಸಮಿತಿಯ ಪದಾಧಿಕಾರಿಗಳು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಯಘೋಷ ಹಾಕಿದರು. ಸೇನೆ ಅಧ್ಯಕ್ಷ ವಿಶ್ವನಾಥ ಮಾಳಗಿ, ಈರಣ್ಣ ಪೂಜಾರಿ, ಚಿತ್ರದುರ್ಗದ ರಾಜ ಪರಶುರಾಮ ನಾಯಕ, ಪ್ರಸನ್ನ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ್, ಸದಸ್ಯರಾದ ಲಿಂಗಪ್ಪ, ಹನುಮಂತ, ಅಬ್ದುಲ್ ಜಂತೆ, ಭಾನು ಪ್ರಕಾಶ್, ಹುಲುಗಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.