ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ ಪೊಲೀಸ್ ಸಹಾಯವಾಣಿ ಆರಂಭ

Last Updated 8 ಮಾರ್ಚ್ 2022, 13:26 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯಾದ್ಯಂತ ಅಗತ್ಯ ತುರ್ತು ಸೇವೆ ಒದಗಿಸಲು ಸಹಾಯವಾಣಿ ಆರಂಭಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದರು.

ಯಾವುದೇ ತುರ್ತು ಪರಿಸ್ಥಿತಿ ಇದ್ದರೂ ಸಾರ್ವಜನಿಕರು 112 ಸಂಖ್ಯೆಗೆ ಕರೆ ಮಾಡಿ ವಿಷಯ ತಿಳಿಸಬಹುದು. ಜಿಲ್ಲೆಯ ವಿವಿಧ ಉಪ ವಿಭಾಗಗಳಲ್ಲಿ ಇಆರ್‌ಎಸ್‌ಎಸ್ ವಾಹನಗಳು ಸಹಾಯವಾಣಿ ಸೇವೆಗೆ ನಿರತವಾಗಿದ್ದು, ದಿನದ 24 ಗಂಟೆ ಅವುಗಳ ಪ್ರಯೋಜನ ಪಡೆಯಬಹುದು ಎಂದು ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ಅತಿ ಶೀಘ್ರದಲ್ಲಿ ಅಂದರೆ 10-15 ಸೆಕೆಂಡುಗಳಲ್ಲಿ ಕರೆ ಸ್ವೀಕರಿಸಿ ತ್ವರಿತ ಸೇವೆ ಒದಗಿ‌ಸಲಾಗುತ್ತದೆ. ಈಗಾಗಲೆ ಟ್ವಿಟರ್ ಖಾತೆ ತೆರೆದು ಸೇವೆ ಒದಗಿಸಲಾಗುತ್ತಿದೆ. ನೂತನ ವೆಬ್ ಸೈಟ್ ಸಹ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT