ಸೋಮವಾರ, ಏಪ್ರಿಲ್ 19, 2021
32 °C

ಉತ್ತನೂರಿನಲ್ಲಿ ಗ್ರಾಮ ವಾಸ್ತವ್ಯ: ಮನೆಗಳಿಗೆ ಜಿಲ್ಲಾಧಿಕಾರಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಜಿಲ್ಲೆಯ‌ ಸಿರುಗುಪ್ಪ ತಾಲ್ಲೂಕಿನ ಉತ್ತನೂರು ಗ್ರಾಮದಲ್ಲಿ ವಾಸ್ತವ್ಯದ ಸಲುವಾಗಿ ಶನಿವಾರ ಭೇಟಿ ನೀಡಿರುವ ಜಿಲ್ಲಾಧಿಕಾರಿ ಪವನ್ ಕುಮಾರ ಮಾಲಪಾಟಿ ಗ್ರಾಮದ ಎಲ್ಲ ಓಣಿಗಳಲ್ಲೂ ಸಂಚರಿಸಿ ಗ್ರಾಮಸ್ತರ ಅಹವಾಲು ಆಲಿಸುತ್ತಿದ್ದಾರೆ.

ಬೆಳಿಗ್ಗೆ 10.30 ರ ವೇಳೆಗೆ ಅವರು ಗ್ರಾಮಕ್ಕೆ ಬಂದ ಕೂಡಲೇ  ಸಂಚಾರ ಆರಂಭಿಸಿದರು.

ಪ್ರತಿ ಮನೆ ಮುಂದೆಯೂ ನಿಂತು ಮನೆಯ ಸದಸ್ಯರ ಯೋಗಕ್ಷೇಮ ವಿಚಾರಿಸಿ, ಸಮಸ್ಯೆಗಳಿದ್ದರೆ ತಿಳಿಸಿ ಎಂದು ಕೇಳಿದರು. ಕೆಲವರು‌ ಪಡಿತರ‌ ಚೀಟಿ, ವೃದ್ಧಾಪ್ಯ ವೇತನ ಸಮಸ್ಯೆಗಳ ಕಡೆಗೆ ಗಮನ ಸೆಳೆದರು. ನೀರಿನ ಸಮಸ್ಯೆ. ರಸ್ತೆ ಸಮಸ್ಯೆ ಪರಿಹರಿಸುವಂತೆ ಕೆಲವರು ಮನವಿ ಮಾಡಿದರು.

ಉಪವಿಭಾಗಾಧಿಕಾರಿ ರಮೇಶ ಕೊನರೆಡ್ಡಿ  ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಮಸ್ಯೆಗಳ ಪಟ್ಟಿ ಸಿದ್ಧಪಡಿಸಿಕೊಂಡು ಕ್ರಮ ಕೈಗೊಳ್ಳುತ್ತಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು