ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆ‌ ರಚನೆ ಸಲ್ಲದು: ಶಾಸಕ ಜಿ.ಸೋಮಶೇಖರ ರೆಡ್ಡಿ 

Last Updated 28 ಸೆಪ್ಟೆಂಬರ್ 2019, 6:51 IST
ಅಕ್ಷರ ಗಾತ್ರ

ಬಳ್ಳಾರಿ: ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಜಿ.ಸೋಮಶೇಖರ ರೆಡ್ಡಿ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ‌ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಜಿಲ್ಲೆಯಲ್ಲಿ ಬಿಜೆಪಿಯ ನಾಲ್ವರು ಶಾಸಕರಿದ್ದೇವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮನ್ನು ಕರೆದು ಚರ್ಚೆ ನಡೆಸಬೇಕು' ಎಂದು ಆಗ್ರಹಿಸಿದರು.

'ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಬಳ್ಳಾರಿ ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದೇವೆ' ಎಂದರು.

'ನವೆಂಬರ್ ತಿಂಗಳಲ್ಲಿ ಹಂಪಿ ಉತ್ಸವವನ್ನು ಆಚರಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿಯವರೊಂದಿಗೆ ಈ ಸಂಬಂಧ ಚರ್ಚೆ ನಡೆಸುತ್ತೇವೆ. ಈ ಹಿಂದೆ ಹಂಪಿ ಉತ್ಸವ ಆಚರಣೆ ಗಾಗಿ ಪ್ರತಿಭಟನೆ ನಡೆಸಿದ್ದೇವು. ಈಗಲೂ ಹಂಪಿ ಉತ್ಸವ ಆಚರಣೆ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT