ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ| ಮುದ್ಲಾಪುರ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

Last Updated 5 ಡಿಸೆಂಬರ್ 2019, 5:14 IST
ಅಕ್ಷರ ಗಾತ್ರ

ಹೊಸಪೇಟೆ: ನಿವೇಶನ ಹಾಗೂ ಮನೆಗಳಿಗೆ ಹಕ್ಕುಪತ್ರ ನೀಡುವುದು ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ತಾಲ್ಲೂಕಿನ 88 ಮುದ್ಲಾಪುರ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ, ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಗ್ರಾಮದಲ್ಲಿ ಒಟ್ಟು 561 ಮತದಾರರಿದ್ದು ಇದುವರೆಗೆ 17 ಪುರುಷ,4 ಮಹಿಳಾ ಮತದಾರರಷ್ಟೇ ಹಕ್ಕು ಚಲಾಯಿಸಿದ್ದಾರೆ. ಮತದಾನ ಬಹಿಷ್ಕರಿಸಿರುವ ಕಾರಣ ಮತಗಟ್ಟೆಯಲ್ಲಿ ಜನರಿಲ್ಲದೆ ಬಿಕೋ ಎನ್ನುತ್ತಿದೆ.

ಆನಂದ್ ಸಿಂಗ್, ಬಂಡಾಯ ಅಭ್ಯರ್ಥಿ ಕವಿರಾಜ್ ಮತದಾನ

ವಿಜಯನಗರ ಕ್ಷೇತ್ರದ ಉಪಚುನಾವಣೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಿಗ್ಗೆ ಏಳು ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಬಹುತೇಕ ಮತಗಟ್ಟೆಗಳಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿವೆ.

ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ನಗರದ 21ನೇ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು. ಅವರ ತಂದೆ ಪೃಥ್ವಿರಾಜ್ ಸಿಂಗ್, ಪತ್ನಿ ಲಕ್ಷ್ಮಿ ಸಿಂಗ್, ಮಗ ಸಿದ್ಧಾರ್ಥ, ಮಗಳು ವೈಷ್ಣವಿ ಜತೆಗಿದ್ದರು.

ಬಿಜೆಪಿ ಬಂಡಾಯ ಅಭ್ಯರ್ಥಿ ಕವಿರಾಜ್ ಅರಸ್ ಅವರು ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಮತಗಟ್ಟೆ ಸಂಖ್ಯೆ 198ರಲ್ಲಿ ಮತದಾನ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ, ಜೆ‌ಡಿ‌ಎಸ್ ಅಭ್ಯರ್ಥಿ ಎನ್.ಎಂ.ನಬಿ ಅವರು ಕ್ಷೇತ್ರದ ಮತದಾರರು ಅಲ್ಲದ ಕಾರಣ ಹಕ್ಕು ಚಲಾಯಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT