ವ್ಯಾಸರಾಯರ ವೃಂದಾವನ ಧ್ವಂಸಕ್ಕೆ ಸಂಸದ, ಶಾಸಕರ ಖಂಡನೆ
ಹೊಸಪೇಟೆ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಆನೆಗುಂದಿಯಲ್ಲಿ ವ್ಯಾಸರಾಯರ ವೃಂದಾವನ್ನು ಧ್ವಂಸಗೊಳಿಸಿರುವ ದುಷ್ಕೃತ್ಯವನ್ನು ಸಂಸದ ವೈ. ದೇವೇಂದ್ರಪ್ಪ, ಶಾಸಕ ಆನಂದ್ ಸಿಂಗ್ ಖಂಡಿಸಿದ್ದಾರೆ.
‘ನಿಧಿ ಆಸೆಗಾಗಿ ವೃಂದಾವನ್ನು ಧ್ವಂಸಗೊಳಿಸಿರುವುದು ಅಕ್ಷಮ್ಯ ಅಪರಾಧ. ಪದೇ ಪದೇ ಹಂಪಿ ಸುತ್ತಮುತ್ತ ಇಂತಹ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ. ಹಂಪಿ ಸ್ಮಾರಕಗಳು ಹಾಗೂ ಅದರ ಸುತ್ತಮುತ್ತಲಿನ ಸ್ಥಳಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಸಂಸತ್ತಿನಲ್ಲಿ ಕೇಂದ್ರ ಸರ್ಕರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ’ ಎಂದು ವೈ. ದೇವೇಂದ್ರಪ್ಪ ಹೇಳಿದ್ದಾರೆ.
‘ದುಷ್ಕರ್ಮಿಗಳು ಮೂರು ಅಡಿಗಳ ವರೆಗೆ ನೆಲ ಅಗೆದು, ವೃಂದಾವನ ಹಾಳು ಮಾಡಿರುವುದು ತೀವ್ರ ಖಂಡನಾರ್ಹ. ಇದನ್ನು ಕಟುವಾಗಿ ಖಂಡಿಸುತ್ತೇನೆ. ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕು’ ಎಂದು ಆನಂದ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.