ಮಂಗಳವಾರ, ಡಿಸೆಂಬರ್ 1, 2020
26 °C

ಸಚಿವ ಆನಂದ್ ಸಿಂಗ್‌ಗೆ ಭವ್ಯ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ : ನೂತನ ವಿಜಯನಗರ ಜಿಲ್ಲೆ ರಚಿಸುವ ಪ್ರಸ್ತಾವಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ಕೊಡಿಸುವಲ್ಲಿ ಯಶಸ್ವಿಯಾದ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರನ್ನು ಬುಧವಾರ ನಗರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸತ್ಕರಿಸಿದರು.

ಸಂಪುಟ ಸಭೆ ಮುಗಿಸಿಕೊಂಡು ನಗರಕ್ಕೆ ಆಗಮಿಸಿದ ಸಚಿವರನ್ನು ವಿವಿಧ ಸಂಘಟನೆಗಳ ಮುಖಂಡರು ಭವ್ಯವಾಗಿ ಸ್ವಾಗತಿಸಿದರು. ಬಿಜೆಪಿ ಮುಖಂಡರು, ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಆನಂದ ಸಿಂಗ್ ಅವರಿಗೆ ಜೈಕಾರ ಹಾಕಿದರು.

‘ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆ ರಚಿಸುವ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ನಾಡಿಗೆ ಹೆಮ್ಮೆ ತರುವ ನಿರ್ಧಾರ ಕೈಗೊಂಡ ಸಿಎಂ ಹಾಗೂ ಸಂಪುಟದ ಎಲ್ಲ ಸದಸ್ಯರನ್ನು ಅಭಿನಂದಿಸುತ್ತೇವೆ’ ಎಂದು ಸಚಿವ ಆನಂದ ಸಿಂಗ್ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು