ಮಂಗಳವಾರ, ಅಕ್ಟೋಬರ್ 22, 2019
21 °C

ವನ್ಯಜೀವಿ ಸಪ್ತಾಹ; ಜನಜಾಗೃತಿ ಜಾಥಾ

Published:
Updated:
Prajavani

ಹೊಸಪೇಟೆ: ವನ್ಯಜೀವಿ ಸಪ್ತಾಹದ ಪ್ರಯುಕ್ತ ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಿಂದ ಮಂಗಳವಾರ ನಗರದಲ್ಲಿ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಮುನ್ಸಿಪಲ್‌ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ, ಪೂರ್ಣಿಮಾ ಯಾದವ್‌, ಹಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಆನಂದ್‌ ಚೌಹಾಣ್‌ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ನಂತರ ನಗರದ ಪ್ರಮುಖ ಮಾರ್ಗಗಳಲ್ಲಿ ಜಾಥಾ ನಡೆಯಿತು. ವನ್ಯಜೀವಿಗಳ ಸಂರಕ್ಷಣೆಯ ಬರಹ ಹೊಂದಿರುವ ಫಲಕಗಳನ್ನು ಹಿಡಿದುಕೊಂಡು ಕಾಲೇಜು ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು. ನಂತರ ಕಮಲಾಪುರದ ವಾಜಪೇಯಿ ಉದ್ಯಾನದಲ್ಲಿ ವನ ಮಹೋತ್ಸವ ಆಚರಿಸಲಾಯಿತು. ಪ್ರೌಢದೇವರಾಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆವರಣದಲ್ಲಿ ಸಸಿ ನೆಟ್ಟರು.

ಇದಕ್ಕೂ ಮುನ್ನ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಆನಂದ್‌ ಚೌಹಾಣ್‌, ‘ಬಹುತೇಕ ವನ್ಯಜೀವಿಗಳು ಅಳಿವಿನ ಅಂಚಿಗೆ ಬಂದಿವೆ. ಅವುಗಳನ್ನು ಸಂರಕ್ಷಿಸಿದರೆ ಮುಂದಿನ ಪೀಳಿಗೆ ನೋಡಬಹುದು. ಅಳಿದುಳಿದಿರುವ ವನ್ಯಜೀವಿಗಳನ್ನು ಈಗಿನಿಂದಲೇ ಸಂರಕ್ಷಿಸಬೇಕು. ಅದಕ್ಕೆ ಪೂರಕವಾದ ವಾತಾವರಣ ನಿರ್ಮಿಸಬೇಕು’ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್‌ ವೃಷಿಣಿ ಮಾತನಾಡಿ, ‘ಈ ಸಲ ವನ್ಯಜೀವಿ ಸಪ್ತಾಹವನ್ನು ಬಹಳ ಭಿನ್ನವಾಗಿ ಆಚರಿಸಲಾಗುತ್ತಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದಕ್ಕಾಗಿ ಚಿತ್ರಕಲೆ, ಪ್ರಬಂಧ, ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಒಂದಿಡಿ ವಾರ ವಾಜಪೇಯಿ ಉದ್ಯಾನಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗುತ್ತಿದೆ’ ಎಂದು ಹೇಳಿದರು.

ವಲಯ ಅರಣ್ಯ ಅಧಿಕಾರಿಗಳಾದ ರಂಗಸ್ವಾಮಿ, ರಮೇಶ, ಉಪ ವಲಯ ಅರಣ್ಯ ಅಧಿಕಾರಿ ಪರಮೇಶ್ವರಯ್ಯ, ಸಿಬ್ಬಂದಿ ಇದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)