ಬುಧವಾರ, ಅಕ್ಟೋಬರ್ 21, 2020
26 °C
ಜಿಲ್ಲೆಯಲ್ಲಿ 14 ದಿನದಲ್ಲಿ ವಾಡಿಕೆಗಿಂತ ಅಧಿಕ ಮಳೆ

ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತ ಮುನ್ನೆಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಜಿಲ್ಲೆಯಲ್ಲಿ ಅತ್ಯಧಿಕ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಮುಂಜಾಗ್ರತೆ ಕ್ರಮಗಳನ್ನು ಮಂಗಳವಾರದಿಂದಲೇ ಕೈಗೊಂಡಿದ್ದು, ಎಲ್ಲ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಸೂಚನೆ ನೀಡಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರವೇ ಮಂಗಳವಾರ ಜಿಲ್ಲೆಯ ವಿವಿಧೆಡೆ ಬಿರುಗಾಳಿಯಿಂದ ಕೂಡಿದ ಭಾರಿ ಮಳೆ ಸುರಿದಿತ್ತು. ಬುಧವಾರವೂ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ. ಬೆಳೆ ನಷ್ಟವಾಗಿದೆ. ಹಲವೆಡೆ ಕೆರೆಗಳು ಕೋಡಿ ಬಿದ್ದಿವೆ. ಮನೆಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೆ ಹಾನಿಯಾಗಿದೆ.

ಜಂಟಿ ಸಮೀಕ್ಷೆ: ಮನೆ ಹಾಗೂ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆಯನ್ನೂ ತ್ವರಿತವಾಗಿ ನಡೆಸುವಂತೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಕುಲ್‌ ‘ಪ್ರಜವಾಣಿ’ಗೆ ಬುಧವಾರ ತಿಳಿಸಿದರು.

‘ಮಳೆ ನೀರು ಹೆಚ್ಚು ಹರಿಯುವ ಸ್ಥಳಗಳಿಂದ ವಾಸ ತೆರವುಗೊಳಿಸುವಂತೆ ಸೂಚಿಸಲಾಗಿದೆ. ತುಂಬಲಿರುವ ಮತ್ತು ತುಂಬಿರುವ ಹಳ್ಳ, ಕೆರೆಗಳ ಬಳಿ ಮುನ್ನೆಚ್ಚರಿಕೆ ವಹಿಸಲಾಗಿದೆ.ಹಾನಿಯಾದ ಮನೆಗಳಿರುವ ಪ್ರದೇಶಕ್ಕೂ ಭೇಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ಅಧಿಕ ಮಳೆ: ಜಿಲ್ಲೆಯಾದ್ಯಂತ ಅಕ್ಟೋಬರ್‌ ತಿಂಗಳಲ್ಲಿ ಇದುವರೆಗೆ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಐದು ದಿನಗಳಿಂದ ಜಿಲ್ಲೆಯ ಎಲ್ಲತಾಲ್ಲೂಕುಗಳಲ್ಲೂ ಮಳೆ ಸುರಿಯುತ್ತಿದೆ. ಸಂಡೂರಿನಲ್ಲಿ 9.60 ಸೆಂ.ಮೀ, ಹಡಗಲಿಯಲ್ಲಿ ಗರಿಷ್ಠ 6.14 ಸೆಂ.ಮೀ, ಕೊಟ್ಟೂರಿನಲ್ಲಿ 6.42 ಸೆಂ.ಮೀ ಮಳೆಯಾಗಿದೆ. ಉಳಿದ ತಾಲ್ಲೂಕುಗಳಲ್ಲಿ ಸರಾಸರಿ2ರಿಂದ 3 ಸೆಂ.ಮೀ ಮಳೆಯಾಗಿದೆ. ಪ್ರಸಕ್ತ ವಾರವೂ ಈ ತಾಲ್ಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುವ ನಿರೀಕ್ಷೆ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು