ಶುಕ್ರವಾರ, ಜನವರಿ 24, 2020
16 °C

ಯೇಸು ಮೂರ್ತಿ ಭಗ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ತಾಲ್ಲೂಕಿನ ಕಮಲಾಪುರದ ಸಂತ ಅಂಥೋನಿ ಚರ್ಚ್‌ ಆವರಣದಲ್ಲಿ ನಿರ್ಮಿಸಿದ್ದ ಗೋದಲಿಯೊಳಗಿನ ಯೇಸು ಕ್ರಿಸ್ತನ ಚಿಕ್ಕ ಮೂರ್ತಿಯನ್ನು ದುಷ್ಕರ್ಮಿಗಳು ಬುಧವಾರ ಸಂಜೆ ಭಗ್ನಗೊಳಿಸಿದ್ದಾರೆ.

ಕತ್ತು, ಕೈಗಳನ್ನು ಮುರಿದು ಮೂರ್ತಿಯನ್ನು ಭಗ್ನಗೊಳಿಸಲಾಗಿದೆ. ‘ಚರ್ಚ್‌ನಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಸಂಶಯದ ಆಧಾರದ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ’ ಎಂದು ಪೊಲೀಸ್‌ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು