ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗ ಜಾಗೃತಿ ಅಭಿಯಾನ

Last Updated 19 ಜೂನ್ 2019, 14:42 IST
ಅಕ್ಷರ ಗಾತ್ರ

ಹೊಸಪೇಟೆ: ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಪತಂಜಲಿ ಯೋಗ ಸಮಿತಿಯಿಂದ ಬುಧವಾರ ಸಂಜೆ ನಗರದಲ್ಲಿ ಯೋಗ ಜಾಗೃತಿ ಅಭಿಯಾನ ನಡೆಸಲಾಯಿತು.

ನಗರದ ವಡಕರಾಯ ದೇವಸ್ಥಾನದಿಂದ ಆರಂಭಗೊಂಡ ಅಭಿಯಾನ, ಗಾಂಧಿ ವೃತ್ತ, ಬಸ್‌ ನಿಲ್ದಾಣ, ರೋಟರಿ ವೃತ್ತ, ಕಾಲೇಜು ರಸ್ತೆ ಮೂಲಕ ಹಾದು ಮುನ್ಸಿಪಲ್‌ ಮೈದಾನದಲ್ಲಿ ಕೊನೆಗೊಂಡಿತು.

ಇದೇ 21ರಂದು ಬೆಳಿಗ್ಗೆ 5.30ಕ್ಕೆ ನಗರದ ಮುನ್ಸಿಪಲ್‌ ಮೈದಾನದಲ್ಲಿ ವಿಶ್ವ ಯೋಗ ದಿನಾಚರಣೆ ಹಮ್ಮಿಕೊಂಡಿದ್ದು, ಅದಕ್ಕೆ ಸಂಬಂಧಿಸಿದ ಕರಪತ್ರಗಳನ್ನು ಕಾರ್ಯಕರ್ತರು ಮಾರ್ಗದುದ್ದಕ್ಕೂ ಸಾರ್ವಜನಿಕರಿಗೆ ಹಂಚಿದರು.

ಸಮಿತಿಯ ದಾಕ್ಷಾಯಿಣಿ, ಬಸವರಾಜ ನಾಲತ್ವಾಡ ಹಾಗೂ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT