ಮಂಗಳವಾರ, ಸೆಪ್ಟೆಂಬರ್ 28, 2021
24 °C

ಕಾಲುವೆಗೆ ಬಿದ್ದ ವ್ಯಕ್ತಿ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ನಾಗೇನಹಳ್ಳಿ ಸಮೀಪದ ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಯಲ್ಲಿ (ಎಲ್‌ಎಲ್‌ಸಿ) ನೀರು ಕುಡಿಯಲು ಹೋಗಿ ಕಾಲು ಜಾರಿ ನೀರಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ಗ್ರಾಮದ ಇಬ್ಬರು ಯುವಕರು ರಕ್ಷಿಸಿದ್ದಾರೆ.

‘ಬಳ್ಳಾರಿಯ ಕೃಷ್ಣಾರೆಡ್ಡಿ (73) ಎಂಬುವರು ಗುರುವಾರ ಕಾಲು ಜಾರಿ ಕಾಲುವೆಯಲ್ಲಿ ಬಿದ್ದಿದ್ದರು. ಅಲ್ಲಿಯೇ ಇದ್ದ ಗ್ರಾಮದ ಯುವಕರಾದ ಈರಣ್ಣ, ಬಸವರಾಜ ತಕ್ಷಣವೇ ಕಾಲುವೆಗೆ ಜಿಗಿದು, ಅವರನ್ನು ರಕ್ಷಿಸಿ ಮೇಲೆ ತಂದಿದ್ದಾರೆ. ನಂತರ ಕೆಲಸಮಯ ಡಾ.ಬಿ.ಆರ್‌. ಅಂಬೇಡ್ಕರ್ ಸಂಘದ ಕಚೇರಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ’ ಎಂದು ಗ್ರಾಮದ ಬಸವರಾಜ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.