ತುರ್ತು ನಿರ್ವಹಣಾ ನಿಧಿಯಿಂದ ರೈತರಿಗೆ ತಲಾ ₹2 ಸಾವಿರ

ಬೆಂಗಳೂರು: ರಾಜ್ಯದ ತುರ್ತು ಕಾರ್ಯಕ್ರಮಗಳ ನಿರ್ವಹಣಾ ನಿಧಿಯ (contingency fund) ಮೊತ್ತವನ್ನು ₹ 80 ಕೋಟಿ ರೂ.ನಿಂದ ₹ 2,200 ಕೋಟಿ ರೂ.ಗಳಿಗೆ ಹೆಚ್ಚಿಸಲು ಸುಗ್ರೀವಾಜ್ಞೆ ಹೊರಡಿಸಲಾಗಿದೆ.
ಈ ನಿಧಿಯಿಂದ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ’ಯಡಿ ರೈತರಿಗೆ ಮೊದಲ ಕಂತಿನ ₹2,000 ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಸುಗ್ರಿವಾಜ್ಞೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.