ಶುಕ್ರವಾರ, ಜೂನ್ 5, 2020
27 °C

ಆದಿಚುಂಚನಗಿರಿ ಮಠದಿಂದ ₹50 ಲಕ್ಷ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೊರೊನಾ ಸೋಂಕು ತಡೆಗಟ್ಟಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆದಿಚುಂಚನಗಿರಿ ಮಹಾಸಂಸ್ಥಾನವು ₹ 50 ಲಕ್ಷ ದೇಣಿಗೆ ನೀಡಲಿದೆ’ ಎಂದು ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

‘ಮಠವು ಈ ಹಿಂದೆ ಕಾರ್ಗಿಲ್ ಯುದ್ಧ, ತಮಿಳುನಾಡಿನಲ್ಲಿ ಸಂಭವಿಸಿದ ಸುನಾಮಿ, ನೆರೆಹಾವಳಿ, ಬರಗಾಲ, ಪ್ರಕೃತಿ ವಿಕೋಪ, ಸೇರಿದಂತೆ ಹಲವು ಸಂದರ್ಭಗಳಲ್ಲಿ ಜನತೆಗೆ ಅಗತ್ಯವಾದ ವಸ್ತುಗಳನ್ನು ನೀಡುವ ಮೂಲಕ ತನ್ನ ಸಮಾಜಸೇವೆಯನ್ನು ಮಾಡಿದೆ. ಜನರ ಒಳಿತಿಗಾಗಿಯೇ ಲಾಕ್‌ಡೌನ್ ಜಾರಿಗೆ ತರಲಾಗಿದ್ದು, ಇದನ್ನು ಎಲ್ಲರೂ ಪಾಲಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.