ಪ್ರವಾಹ ಸಂತ್ರಸ್ತರಿಗೆ ರಾಜ್ಯ ಸರ್ಕಾರಿ ನೌಕರರಿಂದ ₹ 200 ಕೋಟಿ

ಬೆಂಗಳೂರು: ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರ್ಕಾರಿ ನೌಕರರು ಒಂದು ದಿನದ ಸಂಬಳ ನೀಡಲಿದ್ದು, ಸುಮಾರು 200 ಕೋಟಿ ರೂಪಾಯಿ ಸಂಗ್ರಹವಾಗಲಿದೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಶನಿವಾರ ಇಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಬಳ ರೂಪದಲ್ಲಿ 175 ಕೋಟಿಯಷ್ಟು ಸಂಗ್ರಹವಾಗುತ್ತದೆ. ಕೆಲವರು ವೈಯಕ್ತಿಕವಾಗಿ 50 ಸಾವಿರ, 1 ಲಕ್ಷ ರೂಪಾಯಿ ಕೊಡಲಿದ್ದಾರೆ. ಹೀಗಾಗಿ 200 ಕೋಟಿ ರೂಪಾಯಿಯನ್ನು ಸರ್ಕಾರಿ ನೌಕರರಿಂದ ಸಂಗ್ರಹಿಸಿ ಕೊಡಲಾಗುತ್ತದೆ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.