ಮಂಗಳವಾರ, ಅಕ್ಟೋಬರ್ 27, 2020
25 °C

ಕೋವಿಡ್ ಪರಿಹಾರ ನಿಧಿ: ₹ 36 ಲಕ್ಷ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಕೋವಿಡ್–19 ಪರಿಹಾರ ನಿಧಿಗೆ ಬೆಂಗಳೂರು ಕ್ಲಬ್‌ ಸದಸ್ಯರು ₹ 36 ಲಕ್ಷ ನೀಡಿದ್ದಾರೆ. 

152 ವರ್ಷದ ಹಳೆಯದಾದ ಈ ಕ್ಲಬ್ ಸಾಮಾಜಿಕ ಕಾರ್ಯಗಳಿಗೆ ಸ್ಪಂದಿಸುವ ಜತೆಗೆ ಸರ್ಕಾರದ ಜತೆಗೆ ಕೂಡ ಕೈಜೋಡಿಸುತ್ತಾ ಬಂದಿದೆ. ಕೋವಿಡ್‌ನಿಂದಾಗಿ ರಾಜ್ಯ ಸಂಕಷ್ಟವನ್ನು ಎದುರಿಸುತ್ತಿರುವ ಕಾರಣ ಕ್ಲಬ್‌ನ ಸದಸ್ಯರು ಸ್ವಯಂಪ್ರೇರಿತರಾಗಿ ಹಣವನ್ನು ನೀಡಿದ್ದಾರೆ. ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕ್ಲಬ್‌ನ ಸದಸ್ಯರು ಚೆಕ್‌ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು