ಗುರುವಾರ, 7 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪದರ್ಶಿ ಮೇಲೆ ಅತ್ಯಾಚಾರಕ್ಕೆ ಯತ್ನ

ಫೋಟೊಶೂಟ್ ನೆಪದಲ್ಲಿ ಕೃತ್ಯ ಎಸಗಿದ್ದ ಆರೋಪಿ ಬಂಧನ
Last Updated 4 ಮೇ 2019, 19:55 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ರೂಪದರ್ಶಿಯೊಬ್ಬರನ್ನು ಕುಪ್ಪಂನ ಟೇಕಲ್ ರೈಲ್ವೆ ನಿಲ್ದಾಣಕ್ಕೆ ಕರೆದೊಯ್ದು ಚಾಕು ತೋರಿಸಿ ಅತ್ಯಾ ಚಾರಕ್ಕೆ ಯತ್ನಿಸಿದ್ದ ಆರೋಪದಡಿ ಸೋಮಶೇಖರ್ (34) ಎಂಬಾ ತನನ್ನು ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

‘ಬಂಗಾರಪೇಟೆಯ ಸೋಮ ಶೇಖರ್, ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿಸುವುದಾಗಿ ಹೇಳಿ ರೂಪದರ್ಶಿಯನ್ನು ನಂಬಿಸಿದ್ದ. ಫೋಟೊಶೂಟ್ ನೆಪದಲ್ಲಿ ಅವರನ್ನು ಕರೆಸಿ ಕೃತ್ಯ ಎಸಗಿದ್ದ’ ಎಂದು ಪೊಲೀಸರು ಹೇಳಿದರು.

ವಾಟ್ಸ್‌ಆ್ಯಪ್ ಗ್ರೂಪ್‌ನಿಂದ ಪರಿಚಯ: ‘ವೆಬ್ ಧಾರಾವಾಹಿಗಳಲ್ಲಿ ನಟಿಸಿದ್ದ ರೂಪದರ್ಶಿ, ಸಿನಿಮಾ ಕಲಾವಿದರು ಹಾಗೂ ತಂತ್ರಜ್ಞರು ಇರುವ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿದ್ದರು. ಆ ಗ್ರೂಪ್‌ನಲ್ಲಿದ್ದ ಆರೋಪಿ, ರೂಪದರ್ಶಿಯ ಮೊಬೈಲ್ ನಂಬರ್ ಪಡೆದು ಕರೆ ಮಾಡಲಾರಂಭಿಸಿದ್ದ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT