ಆಸ್ಪತ್ರೆಯ ಟ್ರಾಮಾ ಕೇಂದ್ರ ದಲ್ಲಿ ಕಾಯಕಲ್ಪ ಪರಿವೀಕ್ಷಣೆ ಸಂದರ್ಭದಲ್ಲಿ ಡಾ.ಮಧುಸೂದನ್ ಎಂಬುವವರು ಆರೋಗ್ಯ ಇಲಾಖೆ ಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದೇ ರೀತಿ, ಮಹಿಳಾ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಕೂಡಾ ಅವರು ನಿಂದಿಸಿದ್ದಾರೆ ಎಂದು ಹೇಳಲಾಗಿದೆ. ಪರಸ್ಪರ ಮಾತುಗಳು ತಾರಕಕ್ಕೇರಿ, ಕೆಲ ಹೊತ್ತು ಆಸ್ಪತ್ರೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಆವೇಶಕ್ಕೆ ಒಳಗಾದ ಮಧು ಸೂದನ್, ಕಂಪ್ಯೂಟರ್ ಕೀ ಬೋರ್ಡ್ ಒಡೆದು ಹಾಕಿದ್ದಾರೆ ಎಂದು ಸಿಬ್ಬಂದಿ ದೂರಿದ್ದಾರೆ.