ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | 'ಮೃತ ಪೊಲೀಸ್ ಕುಟುಂಬಗಳಿಗೆ ₹1 ಕೋಟಿ ನೆರವು ನೀಡಿ'

Last Updated 7 ಜುಲೈ 2020, 3:57 IST
ಅಕ್ಷರ ಗಾತ್ರ

ಬೆಂಗಳೂರು: 'ಕೊರೊನಾ ಸೇವೆಯಲ್ಲಿ ನಿರತರಾಗಿರುವ ಪೊಲೀಸ್ ಸಿಬ್ಬಂದಿ ಮರಣ ಹೊಂದಿದರೆ, ಅವರ ಕುಟುಂಬಗಳಿಗೆ ಸರ್ಕಾರ ₹1 ಕೋಟಿ ಪರಿಹಾರ ನೀಡಬೇಕು' ಎಂದು ಶಾಸಕ ಆರ್.ಮಂಜುನಾಥ್ ಒತ್ತಾಯಿಸಿದರು.

'ಕೊರೊನಾದಿಂದ ರಾಜ್ಯದಲ್ಲಿ 5 ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, ಇವರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು. 450 ಪೊಲೀಸ್ ಸಿಬ್ಬಂದಿ ಸೋಂಕಿನಿಂದ ಬಳಲುತ್ತಿದ್ದು, ಇವರಿಗೆ ತುರ್ತಾಗಿ ಗುಣಮಟ್ಟದ ಚಿಕಿತ್ಸೆಯನ್ನು ಸರ್ಕಾರ ಒದಗಿಸಬೇಕು. ಇದಕ್ಕಾಗಿ ತಲಾ ₹5 ಲಕ್ಷ ಬಿಡುಗಡೆ ಮಾಡಬೇಕು' ಎಂದರು.

'ವಿವಿಧ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇದೇ 10ರಂದು ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅವರು ಪ್ರತಿಭಟನೆ ಮಾಡಿದ್ದೇ ಆದರೆ, ಆರೋಗ್ಯ ವ್ಯವಸ್ಥೆ ಮತ್ತಷ್ಟು ಹದಗೆಡುತ್ತದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡಲೇ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಪರಿಹರಿಸಬೇಕು' ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT