ಸೋಮವಾರ, ಮಾರ್ಚ್ 1, 2021
31 °C

ಬೆಂಗಳೂರು ತೊರೆದ 1 ಲಕ್ಷ ಕಾರ್ಮಿಕರು: ಬಿ.ಎಸ್‌.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬಸ್ಸುಗಳು ಮತ್ತು ರೈಲುಗಳ ಮೂಲಕ ತಮ್ಮ ಊರುಗಳಿಗೆ ತೆರಳಿದ್ದಾರೆ. ಕಾರ್ಮಿಕರನ್ನು ಬಸ್ಸಿನಲ್ಲಿ ಕಳಿಸಿಕೊಡುವ ವ್ಯವಸ್ಥೆ ಗುರುವಾರ ಕೊನೆ ದಿನ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಇಲ್ಲೇ ಉಳಿದಿರುವ ನಿರ್ಮಾಣ ಕಾಮಗಾರಿಗಳ ಕಾರ್ಮಿಕರಿಗೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಡಲಾಗಿದೆ. ಇವರಿಗೆ ಕಳೆದ ಒಂದೂವರೆ ತಿಂಗಳಿಂದ ಸಂಬಳ ಮತ್ತು ಊಟದ ವ್ಯವಸ್ಥೆ ಮಾಡಿರುವುದಾಗಿ ಉದ್ಯಮಿಗಳು ಹೇಳಿದ್ದಾರೆ. ರಾಜ್ಯದಲ್ಲಿ ಎಲ್ಲ ರೀತಿಯ ಉದ್ಯಮಗಳು ಆರಂಭವಾಗಬೇಕು. ಕಾರ್ಮಿಕರು ಮತ್ತು ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವಂತಾಗಬೇಕು ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು