ಪಠ್ಯಪುಸ್ತಕ ಲೋಪ ಸರಿಪಡಿಸಲು ಒಕ್ಕಲಿಗರ ಸಂಘದಿಂದ 10 ದಿನಗಳ ಗಡುವು
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸದಿದ್ದರೆ ಮತ್ತೆ ಮಠಾಧೀಶರು, ದಲಿತಹಾಗೂ ಹಿಂದುಳಿದ ಸಮುದಾಯದ ಸಂಘಟನೆಗಳ ಸಭೆ ನಡೆಸಿ ಮುಂದಿನ ಹೋರಾಟದ ಕುರಿತು ತೀರ್ಮಾನಿಸಲಾಗುವುದು ಎಂದು ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ ಎಚ್ಚರಿಸಿದರು.
‘ಫ್ರೀಡಂ ಪಾರ್ಕ್‌ನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಸರ್ಕಾರಕ್ಕೆ 10 ದಿನಗಳ ಗಡುವು ನೀಡಲಾಗಿತ್ತು. ಈ ಅವಧಿ ಒಳಗೆ ಪಠ್ಯ ಸರಿಪಡಿಸಬೇಕು’ ಎಂದು ಪತ್ರಿಕಾ ಗೋಷ್ಠಿಯಲ್ಲಿ ಶನಿವಾರ ಆಗ್ರಹಿಸಿದರು.
‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪತ್ರ ಬರೆದು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯ ಪಠ್ಯ ಮುಂದುವರಿಸುವಂತೆ ಮನವಿ ಮಾಡಿದ್ದಾರೆ. ಹೀಗಾಗಿ, ಸರ್ಕಾರದ ತೀರ್ಮಾನವನ್ನು ಎದುರು ನೋಡುತ್ತಿದ್ದೇವೆ. ಸರ್ಕಾರವು ಸ್ಪಂದಿಸದಿದ್ದರೆ ಮತ್ತೊಂದು ಸುತ್ತಿನ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.