ಮಂಗಳವಾರ, ಏಪ್ರಿಲ್ 20, 2021
26 °C

ಒಂದೇ ದಿನ 10 ಸಾವಿರ ಜನರಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಲಸಿಕೆ ಹಾಕುವ ಪ್ರಕ್ರಿಯೆ ತೀವ್ರಗೊಂಡಿದ್ದು, ಬುಧವಾರ ಒಂದೇ ದಿನ ಹತ್ತು ಸಾವಿರಕ್ಕೂ ಅಧಿಕ ಜನರಿಗೆ ಲಸಿಕೆ ವಿತರಿಸಲಾಗಿದೆ. ಯಾರಲ್ಲೂ ಯಾವುದೇ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ.

45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತಿದ್ದು, ಬೇರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮೊದಲು ಲಸಿಕೆ ಹಾಕಲಾಗುತ್ತಿದೆ. 45ರಿಂದ 59 ವರ್ಷದೊಳಗಿರುವ 1,350 ಮಂದಿಗೆ ಹಾಗೂ 60 ವರ್ಷ ಮೇಲ್ಪಟ್ಟ 9,903 ಹಿರಿಯ ನಾಗರಿಕರಿಗೆ ಲಸಿಕೆ ಹಾಕಲಾಯಿತು.

ಲಸಿಕೆ ಅಭಿಯಾನ 2.0 ಆರಂಭವಾದ ಮೊದಲ ಎರಡು ದಿನಗಳಿಗೆ ಹೋಲಿಸಿದರೆ, ಮೂರನೇ ದಿನ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಮೊದಲ ದಿನ 2,600 ಮಂದಿ ಲಸಿಕೆ ಪಡೆದಿದ್ದರೆ, ಎರಡನೇ ದಿನ 6,313 ಮಂದಿ ಲಸಿಕೆ ಹಾಕಿಸಿಕೊಂಡಿದ್ದರು. ಮೂರನೇ ದಿನವೂ ಕೆಲವೆಡೆ ಸ್ವಲ್ಪ ಮಟ್ಟಿಗೆ ತಾಂತ್ರಿಕ ಸಮಸ್ಯೆ ಕಂಡು ಬಂದಿತ್ತು. ನಂತರ, ಅದನ್ನು ಸರಿಪಡಿಸಿಕೊಂಡು ಸಿಬ್ಬಂದಿಯು ಲಸಿಕೆ ನೀಡಿದರು. ಆನ್‌ಲೈನ್‌ ಜೊತೆಗೆ, ಸ್ಥಳದಲ್ಲಿಯೇ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿರುವುದರಿಂದ ಲಸಿಕೆ ಪಡೆದವರ ಸಂಖ್ಯೆ ಹೆಚ್ಚಾಗಿದೆ.

ರಾಜಧಾನಿಯಲ್ಲಿ ಮತ್ತು ಮೈಸೂರಿನಲ್ಲಿ ಹೆಚ್ಚು ಸಂಖ್ಯೆಯಲ್ಲಿ ಜನರು ಲಸಿಕೆ ಪಡೆದಿದ್ದಾರೆ. ಇವರೊಂದಿಗೆ, ಬುಧವಾರ ಆರೋಗ್ಯ ಕಾರ್ಯಕರ್ತರಲ್ಲಿ 768 ಮಂದಿ ಮೊದಲ ಡೋಸ್ ಹಾಗೂ 2,082 ಮಂದಿ ಎರಡನೇ ಡೋಸ್ ಹಾಗೂ ಮುಂಚೂಣಿ ಕಾರ್ಯಕರ್ತರಲ್ಲಿ 1,191 ಮಂದಿ ಮೊದಲ ಡೋಸ್ ಲಸಿಕೆಯನ್ನು ಪಡೆದುಕೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು