ಬೆಂಗಳೂರು: ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ, ಗೋವಿಂದರಾಜನಗರ ಪೊಲೀಸ್ ಠಾಣೆ ಮತ್ತು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಕಾರ್ಯಾಚರಣೆ ನಡೆಸಿ, ಗಾಂಜಾ ಮಾರಾಟದಲ್ಲಿ ತೊಡಗಿದ್ದ ರೌಡಿ ಸೇರಿ ನಾಲ್ವರನ್ನು ಬಂಧಿಸಿ, ₹90 ಲಕ್ಷ ಮೌಲ್ಯದ 109 ಕೆ.ಜಿ ಗಾಂಜಾ ಹಾಗೂ ವಾಹನಗಳನ್ನು ವಶಪಡಿಕೊಂಡಿವೆ.

ಎಚ್.ಎಸ್.ಆರ್. ಲೇಔಟ್ ಠಾಣೆ ಪೊಲೀಸರು, 4ನೇ ಸೆಕ್ಟರ್, ಫ್ರೀಡಂ ಇಂಟರ್ ನ್ಯಾಷನಲ್ ಶಾಲೆ ಹತ್ತಿರದ ರಸ್ತೆಯಲ್ಲಿ ಗೂಡ್ಸ್ ವಾಹನದಲ್ಲಿಟ್ಟು
ಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ.

ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ, ‘ಒಡಿಶಾದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ತಂದು ನಗರದ ಸಾಫ್ಟ್ವೇರ್ ಉದ್ಯೋಗಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಹೆಚ್ಚಿನ ಲಾಭ ಗಳಿಸುತ್ತಿರುವುದಾಗಿ ಹೇಳಿದ್ದಾನೆ. ಆರೋಪಿಯಿಂದ ₹60 ಲಕ್ಷ ಮೌಲ್ಯದ ಮೊಬೈಲ್ ಫೋನ್, ಗೂಡ್ಸ್ ವಾಹನ, 62 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ರೌಡಿ ಬಂಧನ: ಗಾಂಜಾ ಮಾರಾಟ ಮಾಡುತ್ತಿದ್ದ ರೌಡಿ ಮುಬರಾಕ್ನನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿ, ₹25 ಲಕ್ಷ ಮೌಲ್ಯದ 43 ಕೆ.ಜಿ 80 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಪಟ್ಟೇಗಾರ್ ಪಾಳ್ಯದ ದೊಡ್ಡ ಮೋರಿಯ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ, ಮಾಲು ವಶಪಡಿಸಿಕೊಂಡರು. ಈತ ಬನಶಂಕರಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ 29 ಪ್ರಕರಣಗಳು ದಾಖಲಾಗಿವೆ ಎಂಬುದು ಗೊತ್ತಾಗಿದೆ.

ಸಿಸಿಬಿ ಕಾರ್ಯಾಚರಣೆ: ಡ್ರಗ್ಸ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ₹4.20 ಲಕ್ಷ ಮೌಲ್ಯದ 4 ಕೆ.ಜಿ 185 ಗ್ರಾಂ ಗಾಂಜಾ, ಎರಡು ಮೊಬೈಲ್, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

‘ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ಎಂ.ಪಾಳ್ಯದ ವೀರಾಂಜನೇಯಸ್ವಾಮಿ ದೇವಸ್ಥಾನದ ಬಳಿ ಇಬ್ಬರು ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆಂಧ್ರಪ್ರದೇಶದ ಅರಕ್ಕೂ ವ್ಯಾಲಿಯ ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಖರೀದಿಸಿ, ನಗರದ ನಾಗರಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಹಣ ಸಂಪಾದನೆ ಮಾಡುತ್ತಿರುವುದಾಗಿ ಹೇಳಿದ್ದಾನೆ’ ಎಂದು ಪೊಲೀಸರು ಹೇಳಿದರು.

ಆರೋಪಿಗಳ ವಿರುದ್ಧ ಬೈಯ್ಯಪ್ಪನಹಳ್ಳಿ ಮತ್ತು ಎಚ್ಎಎಲ್ ಪೊಲೀಸ್ ಠಾಣೆಗಳಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ಪ್ರಾಥಮಿಕ ವಿಚಾರಣೆಯಿಂದ ಗೊತ್ತಾಗಿದ್ದು, ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.