ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.16 ಲಕ್ಷ ಬ್ಯಾನರ್‌, ಪೋಸ್ಟರ್‌ ತೆರವು: ಮನೋಜ್‌ ಕುಮಾರ್‌ ಮೀನಾ

Published 17 ಮಾರ್ಚ್ 2024, 23:30 IST
Last Updated 17 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣಾ ನೀತಿಸಂಹಿತೆ ಜಾರಿಯಾದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಾದ್ಯಂತ ಕಾರ್ಯಾಚರಣೆ ನಡೆಸಿ 1.16 ಲಕ್ಷ ಗೋಡೆ ಬರಹ, ಪೋಸ್ಟರ್‌, ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

ಮತದಾರರ ಮೇಲೆ ಪ್ರಭಾವ ಬೀರಬಹುದಾದ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಶನಿವಾರದಿಂದ ಆರಂಭವಾಗಿದೆ. 5,130 ತಂಡಗಳು ರಾಜ್ಯದಾದ್ಯಂತ ಕಾರ್ಯಾಚರಣೆ ನಡೆಸಿವೆ ಎಂದು ಮಾಹಿತಿ ನೀಡಿದ್ದಾರೆ.

24,177 ಗೋಡೆ ಬರಹಗಳನ್ನು ಕಾರ್ಯಾಚರಣೆ ವೇಳೆ ಅಳಿಸಲಾಗಿದೆ. 35,740 ಪೋಸ್ಟರ್‌, 33,683 ಬ್ಯಾನರ್‌, 24,899 ಇತರ ಪ್ರಚಾರ ಸಾಮಗ್ರಿಗಳನ್ನು ತೆರವು ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳನ್ನು ವಿರೂಪಗೊಳಿಸುವಂತಹ 87,212 ಬರಹ, ಬ್ಯಾನರ್‌, ‍ಪೋಸ್ಟರ್‌ಗಳೂ ಇದರಲ್ಲಿ ಸೇರಿವೆ ಎಂದು ಮೀನಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT