ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ವಾಹನ ದಟ್ಟಣೆ ನಿಯಂತ್ರಣಕ್ಕೆ 12 ಕಾರಿಡಾರ್‌: ಮುಖ್ಯಮಂತ್ರಿ

Last Updated 10 ಫೆಬ್ರುವರಿ 2023, 4:56 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ವಾಹನ ದಟ್ಟಣೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು 12 ಕಾರಿಡಾರ್‌ ರಸ್ತೆಗಳನ್ನು ನಿರ್ಮಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಎಚ್‌ಎಎಲ್‌ ವಿಮಾನ ನಿಲ್ದಾಣ ರಸ್ತೆಯಲ್ಲಿ ಸುರಂಜನ್‌ದಾಸ್‌ ಜಂಕ್ಷನ್‌ ಕೆಳಸೇತುವೆಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ನಗರದಲ್ಲಿ ಹೊಸದಾಗಿ ಐದು ಸಂಚಾರ ಪೊಲೀಸ್ ಠಾಣೆ ಸ್ಥಾಪಿಸಿ, ಒಬ್ಬರು ಡಿಸಿಪಿ, ಸಿಬ್ಬಂದಿ, ವಾಹನ ಹಾಗೂ ಎಲ್ಲಾ ಸಲಕರಣೆಗಳನ್ನು ಸರ್ಕಾರ ಒದಗಿಸುತ್ತಿದೆ. ವಾಹನ ದಟ್ಟಣೆಯನ್ನು ಸಂಪೂರ್ಣ ನಿಯಂತ್ರಿಸಲಾಗುತ್ತದೆ ಎಂದರು.

ಸುರಂಜನ್‌ದಾಸ್‌ ಜಂಕ್ಷನ್‌ ಕೆಳಸೇತುವೆ ಮೂಲಕ ವೈಟ್‌ಫೀಲ್ಡ್‌ನಿಂದ ಎಂ.ಜಿ. ರಸ್ತೆಯವರೆಗೆ ಸಂಚಾರ ಸುಗಮವಾಗಲಿದೆ. ನಗರ ಅತಿ ವೇಗದಲ್ಲಿ ಬೆಳೆಯುತ್ತಿದ್ದು, ಪ್ರತಿನಿತ್ಯ 5 ಸಾವಿರ ವಾಹನಗಳು ಹೊಸದಾಗಿ ರಸ್ತೆಗಿಳಿಯುತ್ತವೆ. ಬೆಂಗಳೂರಿನಲ್ಲಿ ದಿನವೂ 10 ಲಕ್ಷ ಜನ ಬಂದುಹೋಗುತ್ತಾರೆ. ಸಂಚಾರ ಸುಗಮಗೊಳಿಸಲು ಅಲ್ಪಾವಧಿ ಹಾಗೂ ದೀರ್ಘಾ ವಧಿ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT